No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 7, 2023
in ಉಡುಪಿ
0
ಮಡಾಮಕ್ಕಿ: ಅದ್ದೂರಿ ಜಾತ್ರಾ ಮಹೋತ್ಸವ, ಕೆಂಡಸೇವೆ, ನಾಳೆ ಪರಿವಾರ ದೈವಗಳ ಕೋಲ, ದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಡಾಮಕ್ಕಿ  |

ಮಾಡು ಒಲ್ಲದ ಖ್ಯಾತಿಯ ಮಡಾಮಕ್ಕಿ ಮಹತೋಭಾರ ವೀರಭದ್ರ ದೇವಸ್ಥಾನದಲ್ಲಿ ಫೆ. 8 ರಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರಾ ಮಹೋತ್ಸವ, ಕೆಂಡಸೇವೆ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ದೇವಳ 1 ಸಾವಿರ ವರ್ಷಕ್ಕೂ ಮಿಕ್ಕಿ ಇತಿಹಾಸದೊಂದಿಗೆ ಪ್ರಸಿದ್ದ ಬಾರ್ಕೂರು ಅರಸರ ಆಳ್ವಿಕೆಗೊಳಪಟ್ಟಿದೆ ಎಂದು ಶಿಲಾಶಾಸನವಿದ್ದು ದೇವಳವು ನೇಪಾಳಿ ಶೈಲಿಯಲ್ಲಿದೆ.

ವೀರಭದ್ರ ದೇವರಿಗೆ ಗರ್ಭಗುಡಿಯೇ ಇಲ್ಲ, ಆದ್ದರಿಂದ ಈ ದೇವಳಕ್ಕೆ ಮಾಡು ಒಲ್ಲದ ವೀರಭದ್ರ ಕ್ಷೇತ್ರವೆಂದು ಪ್ರಸಿದ್ದಿ. ಉತ್ತರದಿಂದ ದಕ್ಷಿಣಕ್ಕೆ ಹರಿಯುವ ಮಡಾಮಕ್ಕಿ ನದಿಯ ತಟದಲ್ಲಿ ಜರಗುವ ಜಾತ್ರೆಯಲ್ಲಿ ವಿವಿಧೆಡೆಗಳಿಂದ ಆಗಮಿಸುವ ಸಾವಿರಾರು ಭಕ್ತರು ಕ್ಷೇತ್ರದ ಮಹಿಮೆಗೆ ಸಾಕ್ಷಿಯಾಗಲಿದ್ದಾರೆ.
ಹಿನ್ನೆಲೆ
ಪುರಾತನ ಕಾಲದಲ್ಲಿ ರಕ್ಕಸರ ಅಟ್ಟಹಾಸ ಹೆಚ್ಚಿದಾಗ ವೃಷಭಯೋಗೇಶ್ವರ ಮುನಿಯು ಶಿವನನ್ನು ಕುರಿತು ಸುದೀರ್ಘ ತಪಸ್ಸು ಮಾಡಿದಾಗ ಶಿವಪುತ್ರ ವೀರಭದ್ರ ಪ್ರತ್ಯಕ್ಷನಾಗಿ ರಕ್ಕಸರನ್ನು ಕಂಡು ಕೋಪೋದ್ರಿಕ್ತನಾಗಿ ತನ್ನ ತಲೆಯನ್ನು ಸಮೀಪದ ದೊಡ್ಡ ಶಿಲೆಗೆ ಬಡಿದನಂತೆ. ಬಡಿತಕ್ಕೆ ಶಿಲೆ ಚೂರು ಚೂರಾಗಿ ಸಿಡಿಯಿತು. ಸಿಡಿದ ಅರ್ಧ ಚಂದ್ರಾಕ್ರತಿಯ ಒಂದು ಶಿಲೆಯನ್ನು ವೃಷಭಯೋಗೇಶ್ವರ ಮುನಿ ತಂದು ಮಡಾಮಕ್ಕಿ ಸಮೀಪದ ದೊಡ್ಡ ಬಾವಿಯಲ್ಲಿ ಮಡಾಮಕ್ಕಿ, ಬೇಳಂಜೆ ಸಂಸ್ಥಾನಗಳ ರಾಜರ ರತ್ನ ವೈಡೂರ್ಯಾಧಿಗಳನ್ನು ತಂದು ಬಾವಿಯಲ್ಲಿ ಹಾಕಿ ಭದ್ರಗೊಳಿಸಿ ಅದಕ್ಕೆ ಮಣ್ಣಿನಕಟ್ಟೆಯನ್ನು ಕಟ್ಟಿ ಅದರ ಮೇಲೆ ತಂದು ಶಿಲೆಯನ್ನು ಪ್ರತಿಷ್ಠೆ ಮಾಡಿದನೆಂದು ಪುರಾಣದಲ್ಲಿ ಉಲ್ಲೇಖವಿದೆ.

ವೀರಭದ್ರನ ಮೊಣಕಾಲನ್ನು ಊರಿ ನೆಲೆಯಾದ ಸ್ಥಳಕ್ಕೆ ಊರಿಗೆ ಮಡಾಮಕ್ಕಿ ಎಂಬ ಹೆಸರು ಬಂದಿದೆ ಎಂದು, ಕ್ಷೇತ್ರಕ್ಕೆ ಕೋಟೆರಾಯ ಪರಿವಾರಗಳು ದೇವಗಣಗಳು ರಕ್ಷಣೆಯಲ್ಲಿದೆ ಎಂದು ಪ್ರತೀತಿ. ಇಲ್ಲಿ ಅರ್ಧಚಂದ್ರಾಕೃತಿಯ ಶಿಲೆಯೇ ವೀರಭದ್ರನ ಸಾನ್ನಿಧ್ಯ. ವೀರಭದ್ರ ನೆಲೆನಿಂತ ಮಣ್ಣಿನ ಕಟ್ಟೆಯ ಮಣ್ಣು(ಮೃತ್ತಿಕೆ) ಪ್ರಸಾದ ರೂಪವಾಗಿ ಭಕ್ತರಿಗೆ ಹಂಚುವುದು ವಿಶೇಷ.
ಜಾತ್ರಾ ಮಹೋತ್ಸವ, ಕೆಂಡ ಸೇವೆ ದಿನದಂದು ತುಲಾಭಾರ ಸೇವೆ ಹಾಗೂ ಇನ್ನೀತರ ಸೇವೆಗಳು, ಮಹಾ ಅನ್ನಸಂತರ್ಪಣೆ, ರಾತ್ರಿ ಕ್ಷೇತ್ರದ ಮೇಳದಿಂದ ಯಕ್ಷಗಾನ ನೃತ್ಯಸೇವೆ, ವೀರಭದ್ರ ಸ್ವಾಮಿ, ಬನಶಂಕರಿ ದೇವಿಯ ದರ್ಶನ, ಕೆಂಡಸೇವೆ, ರಂಗಪೂಜೆ, ಢಮರುಸೇವೆ, ಪರಿವಾರ ದೇವತೆಗಳ ಕೋಲ ಸೇವೆ. ವೀರಭದ್ರ ಸ್ವಾಮಿ ದರ್ಶನದಲ್ಲಿ ಪಾತ್ರಿಯು ಚೂಪಾದ ಮುಳ್ಳಿನ ಪಾದುಕೆಯನ್ನು ಧರಿಸಿ ವೀರಭದ್ರನ ಮಣ್ಣಿನ ಕಟ್ಟೆಯ(ಸನ್ನಿಧಾನ)ವನ್ನು ಪ್ರದಕ್ಷಿಣೆ ಬರುವುದು ಕ್ಷೇತ್ರದಲ್ಲಿ ವಿಶೇಷವಾಗಿದೆ.

ಕ್ಷೇತ್ರದ ಯಕ್ಷಗಾನ ಮೇಳವು ಯಶಸ್ವಿ ತಿರುಗಾಟದೊಂದಿಗೆ ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸುವಲ್ಲಿ ತನ್ನದೇ ಪಾತ್ರ ವಹಿಸುತ್ತಿರುವುದು ಪ್ರಶಂಸನೀಯ.

ಕಾರ್ಯಕ್ರಮಗಳು
ಇಂದು ಮಧ್ಯಾಹ್ನ ಗಂ. 2.30 ರಿಂದ ಶ್ರೀಕ್ಷೇತ್ರಕ್ಕೆ ಭಕ್ತಾದಿಗಳು ಸಮರ್ಪಿಸುವ ಬೆಳ್ಳಿ ಕೊಡುಗೆಗಳನ್ನು ಮಡಾಮಕ್ಕಿ ಪೇಟೆಯಿಂದ ಪ್ರಾರಂಭಗೊಂಡು, ಸೋಮೇಶ್ವರ, ಸೀತಾನದಿ, ಹೆಬ್ರಿ, ಬೇಳಂಜೆ, ಅಲ್ಬಾಡಿ, ಬೆಳ್ವೆ, ಗೋಳಿಯಂಗಡಿ, ಕೊಂಜಾಡಿ, ಶೇಡಿಮನೆ, ಅರಸಮ್ಮಕಾನು, ಮಾಂಡಿಮೂರುಕೈ ಮೂಲಕ ತೆರೆದ ವಾಹನದಲ್ಲಿ ಮೆರವಣಿಗೆ, ನಾಲ್ಕನೆಯ ಮೈಲುಕಲ್ಲಿನಿಂದ ಕಾಲ್ನಡಿಗೆಯಲ್ಲಿ ಪೂರ್ಣಕುಂಭ ಸ್ವಾಗತದೊಂದಿಗೆ ದೇವಸ್ಥಾನಕ್ಕೆ ತಲುಪಿತು.
ಫೆ. 8ರ ಬುಧವಾರ ಬೆಳಗ್ಗೆ ಗಣೇಶ ಪ್ರಾರ್ಥನೆ, ಪುಣ್ಯಾಹ, ನವಕ ಪ್ರಧಾನ ಹೋಮ ಕಲಶ, ಶತ ರುದ್ರಭೀಷೇಕ, ಮಧ್ಯಾಹ್ನ 12 ಕ್ಕೆ ಮಹಾಪೂಜೆ, 12.30ಕ್ಕೆ ತುಲಾಭಾರ ಸೇವೆ, 12.45 ರಿಂದ 3 ರ ತನಕ ಅನ್ನಸಂತರ್ಪಣೆ ನಡೆಯಲಿದೆ.

ರಾತ್ರಿ 8 ಗಂಟೆಗೆ ಕೆಂಡ ಸೇವೆಗೆ ಅಗ್ನಿ ಸ್ಪರ್ಶ, 8.30 ರಿಂದ ಯಕ್ಷಗಾನ ನೃತ್ಯಸೇವೆ, 9 ರಿಂದ ದಾನಿಗಳಿಗೆ ಸನ್ಮಾನ, 9.30 ರಿಂದ ಶ್ರೀ ಸ್ವಾಮಿ ಹಾಗೂ ಅಮ್ಮನವರ ದರ್ಶನ, ಕೆಂಡ ಸೇವೆ, 10.30 ರಿಂದ ಪರಿವಾರ ದೈವಗಳ ಕೋಲ ಹಾಗೂ ದರ್ಶನ, 1.30 ರಿಂದ ರಂಗಪೂಜೆ, ಢಮರು ಸೇವೆ, ವ್ಯಾಘ್ರ ಚಾಮುಂಡಿ ದರ್ಶನ, ಸುತ್ತು ಬಲಿ, ಸ್ವಾಮಿ ದರ್ಶನ, ಪ್ರಸಾದ ವಿತರಣೆ ನಡೆಯಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: coastal newsDakshina KannadaHebriKannada News WebsiteKaravali newsKolaKundapurLatest News KannadaMadamakki TempleMahatobhara Veerabhadra TempleSomeshwaraTulunadu NewsUdupiYakshaganaಅಲ್ಬಾಡಿಕೋಲಬೇಳಂಜೆಮಡಾಮಕ್ಕಿಮಹತೋಭಾರ ವೀರಭದ್ರ ದೇವಸ್ಥಾನಶೇಡಿಮನೆಸೀತಾನದಿಸೋಮೇಶ್ವರಹೆಬ್ರಿ
Share219Tweet123Send
Previous Post

ಚಂದ್ರಗುತ್ತಿ ದೇವಸ್ಥಾನದ ರಥಬೀದಿಯ 22 ಅಂಗಡಿಗಳ ಮಳಿಗೆಗಳ ಬಹಿರಂಗ ಹರಾಜು

Next Post

ಬ್ರಾಹ್ಮಣರು ಮುಖ್ಯಮಂತ್ರಿ ಆಗಬಾರದು ಎಂದು ಎಲ್ಲಿದೆ? ಪೇಜಾವರ ಶ್ರೀ ಪ್ರಶ್ನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಂತಿ, ಸಹಬಾಳ್ವೆಯ ಮಾತು ಕೇವಲ ಮಾತಿನಲ್ಲಿದ್ದರೆ ಪ್ರಯೋಜನವಿಲ್ಲ: ಪೇಜಾವರ ಶ್ರೀಗಳ ಹೇಳಿಕೆ

ಬ್ರಾಹ್ಮಣರು ಮುಖ್ಯಮಂತ್ರಿ ಆಗಬಾರದು ಎಂದು ಎಲ್ಲಿದೆ? ಪೇಜಾವರ ಶ್ರೀ ಪ್ರಶ್ನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL