ಕಲ್ಪ ಮೀಡಿಯಾ ಹೌಸ್ | ಮಣಿಪಾಲ |
ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಯೊಬ್ಬನನ್ನು ಅಟ್ಟಾಡಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ #Minor ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತಂತೆ ಪೊಲೀಸ್ ಇಲಾಖೆ ಮಾಹಿತಿ ನೀಡಿದ್ದು, ಅಭಿಷೇಕ್(23) ಎಂಬ ವಿದ್ಯಾರ್ಥಿ ಹಾಗೂ ಕೆಲವು ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ವಾಗ್ವಾದ ಆಗಿದೆ. ಇದೇ ಕಾರಣಕ್ಕಾಗಿ ವಿದ್ಯಾರ್ಥಿಯನ್ನು ಆತ ವಾಸವಿರುವ ಸರಳಬೆಟ್ಟುವಿನ ಅಪಾರ್ಟ್’ಮೆಂಟ್’ವರೆಗೂ #Apartment ಹಿಂಬಾಲಿಸಿಕೊಂಡು ಬಂದಿದ್ದಾರೆ.
ಅಲ್ಲದೇ, ಅಪಾರ್ಟ್’ಮೆಂಟ್ ಒಳಗೂ ನುಗ್ಗಿ ಆತನನ್ನು ಅಟ್ಟಾಡಿಸಿ ಹಲ್ಲೆ #Attack ಮಾಡಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಘಟನೆಗೆ ಸಂಬಂಧಿಸಿದಂತೆ ಮಣಿಪಾಲ #Manipal ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವ ಅಪ್ರಾಪ್ತ ಸೇರಿ ಆರು ಮಂದಿಯನ್ನು ಬಂಧಿಸಲಾಗಿದೆ. ಇಂದು ಅವರುಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post