ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಉಡುಪಿ: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರಿಗೆ ರಾಜ್ಯ ಸರ್ಕಾರದ ವತಿಯಿಂದ ವೈ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶ ನೀಡಿದ್ದು, ನಿನ್ನೆಯಿಂದಲೇ ಸ್ವಾಮಿಗಳಿಗೆ ವೈ ಶ್ರೇಣಿಯ ಭದ್ರತೆ ಕಲ್ಪಿಸಲಾಗಿದೆ.
ಅಯೋಧ್ಯೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್’ನ ವಿಶ್ವಸ್ಥರಾಗಿರುವ ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ರಾಮಮಂದಿರ ನಿರ್ಮಾಣದ ಜನಜಾಗೃತಿ ಅಭಿಯಾನದಲ್ಲಿ ಸದ್ಯ ನಿರತರಾಗಿ ದೇಶದಾದ್ಯಂತ ಸಂಚಾರ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಉಡುಪಿ ಶಾಸಕ ಕೆ. ರಘುಪತಿ ಭಟ್ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು.
ತ್ವರಿತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹ ಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ರಘುಪತಿ ಭಟ್ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪೇಜಾವರ ಮಠದ ವತಿಯಿಂದ ಕೃತಜ್ಞತೆ ಸಲ್ಲಿಸಲಾಗಿದೆ.










Discussion about this post