ಕಲ್ಪ ಮೀಡಿಯಾ ಹೌಸ್ | ಉಡುಪಿ |
ಹಿಂದೆ ದೇಶದ ಮೇಲೆ ದಾಳಿಗಳಾದಲ್ಲಿ ಹಿಂದಿರುಗಿ ಉತ್ತರ ನೀಡುವ ಪರಿಸ್ಥಿತಿ ಇರಲಿಲ್ಲ. ಆದರೆ ನವಭಾರತ ಯಾರ ಮುಂದೆಯೂ ತಲೆಬಾಗಲ್ಲ. ನಾವು ನಮ್ಮ ದೇಶದ ರಕ್ಷಣೆಗೆ ಬದ್ಧ ಎಂದು ಪ್ರಧಾನಿ ನರೇಂದ್ರ ಮೋದಿ #PM Narendra Modi ಹೇಳಿದರು.
ಇಲ್ಲಿನ ಶ್ರೀಕೃಷ್ಣ ಮಠದಲ್ಲಿ #Udupi Shri Krishna Mutt ನಡೆಯುತ್ತಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮಗೆ ಶಾಂತಿ ಸ್ಥಾಪನೆಯೂ ಗೊತ್ತು, ರಕ್ಷಣೆಯೂ ಗೊತ್ತು. ಮಹಿಳೆಯರು, ನಾಗರಿಕರ ರಕ್ಷಣೆ ನಮ್ಮ ಹೊಣೆ ಎಂದು ಘರ್ಜಿಸಿದರು.
ಪಹಲ್ಗಾಮ್‌ನಲ್ಲಿ #Pehlgam Attack ಅಮಾಯಕ ಹಿಂದೂಗಳ ಮೇಲೆ ನಡೆದ ಹಿಂಸಾಚಾರಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ #Operation Sindoora ನಡೆಸಲಾಯಿತು. ಇತ್ತೀಚೆಗೆ ದೆಹಲಿಯಲ್ಲಿ ನಡೆದಿರುವ ಬಾಂಬ್ ಬ್ಲಾಸ್ಟ್‌ಗೂ ತಕ್ಕ ಉತ್ತರ ನೀಡಲು ನಮ್ಮ ಸೇನೆ ಸಜ್ಜಾಗುತ್ತಿದ್ದು, ಶೀಘ್ರದಲ್ಲೇ ಅಪರೇಷನ್ ಸುದರ್ಶನ #Operation Sudarshana ಮೂಲಕ ಉಗ್ರರಿಗೆ ತಕ್ಕ ಉತ್ತರ ನೀಡಲಾಗುವುದು ಧರ್ಮೋ ರಕ್ಷತಿ ರಕ್ಷಿತಃ ಎಂದು ಮಹಾಭಾರತದ ಸಾಲುಗಳನ್ನು ಉಚ್ಚರಿಸಿ ಎಚ್ಚರಿಕೆ ನೀಡಿದರು.
ನವಭಾರತ ಯಾರ ಮುಂದೆಯೂ ತಲೆಬಾಗಲ್ಲ. ಹಿಂದೆ ಯುದ್ಧಗಳು ನ ನಮಗೆ ಶಾಂತಿ ಸ್ಥಾಪನೆಯೂ ಗೊತ್ತು, ರಕ್ಷಣೆಯೂ ಗೊತ್ತು. ಮಹಿಳೆಯರು, ನಾಗರಿಕರ ರಕ್ಷಣೆ ನಮ್ಮ ಹೊಣೆ ಎಂದ ಮೋದಿ.
ಮಧ್ವಾಚಾರ್ಯರರು ಭಕ್ತಿಯ ಮಾರ್ಗ ತೋರಿಸಿಕೊಟ್ಟಿದ್ದಾರೆ. ಅವರ ಮಾರ್ಗದರ್ಶನದಿಂದ ಆರಂಭಗೊಂಡ ಈ ಅಷ್ಟ ಮಠಗಳು ಧರ್ಮಕಾರ್ಯದಲ್ಲಿ ತೊಡಗಿವೆ. ಕನಕದಾಸರಿಗೆ ನಮಿಸುವ ಪುಣ್ಯ ನನಗೆ ಸಿಕ್ಕಿದೆ. ನನ್ನಂತ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಕೃಷ್ಣ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಭಗವಾನ್ ಕೃಷ್ಣನ ಪ್ರೇರಣೆಯಿಂದಲೇ ಕೆಲವೊಂದು ಯೋಜನೆಗಳನ್ನ ಮಾಡಲಾಗಿದೆ ಎಂದು ಮೋದಿ ಹೇಳಿದರು.
ಮೂರು ದಿನದ ಹಿಂದೆ ನಾನು ಅಯೋಧ್ಯೆಯಲ್ಲಿ ಇದ್ದೆ. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಧರ್ಮಧ್ವಜ ಸ್ಥಾಪನೆ ಆಗಿದೆ. ಅಯೋಧ್ಯೆಯಿಂದ ಉಡುಪಿಯವರೆಗೂ ರಾಮ ಭಕ್ತರು ಸಾಕ್ಷಿಯಾಗಿದ್ದಾರೆ ಎಂದು ಮೋದಿ ಬಣ್ಣಿಸಿದರು.
ಜನಸಂಖ್ಯೆಯಲ್ಲಿ ನಮ್ಮ ವಿ.ಎಸ್.ಆಚಾರ್ಯರನ್ನ ಆಯ್ಕೆ ಮಾಡಿ ಕೊಟ್ಟಿದ್ದು ಉಡುಪಿಯ ಜನ. ಲಕ್ಷ ಕಂಠದ ಮೂಲಕ ಗೀತಾ ಪಠಣ ಒಂದೇ ಸ್ಥಳದಲ್ಲಿ ಆಗಿರೋದು ಹೊಸ ಶಕ್ತಿ ನೀಡಿದೆ. ಈ ಕೆಲಸ ಮಾಡಿರೋ ಸುಗುಣೇಂದ್ರ ಸ್ವಾಮೀಜಿಗೆ ಇವತ್ತಿನ ದಿನ ನಾನು ಪ್ರಣಾಮ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ನನ್ನ ಜನ್ಮ ಗುಜರಾತ್‌ನಲ್ಲಿ ಆಗಿದೆ. ಗುಜರಾತ್ ಹಾಗೂ ಉಡುಪಿಗೆ ಅವಿನಾಭಾವ ಸಂಬಂಧ ಇದೆ. ಉಡುಪಿ ಕೃಷ್ಣನ ದರ್ಶನ ಪಡೆದಿದ್ದು ಆತ್ಮೀಯ, ಆಧ್ಯಾತ್ಮಿಕ ಖುಷಿ ನೀಡಿದೆ. ಉಡುಪಿ ಜನ ಸಂಘ ಹಾಗೂ ಬಿಜೆಪಿಯ ಕರ್ಮಭೂಮಿ. ಲಕ್ಷ ಕಂಠದ ಮೂಲಕ ಗೀತಾದ ಪಠಣ ಒಂದೇ ಸ್ಥಳದಲ್ಲಿ ಒಂದೇ ವೇಳೆ ಆಗಿರೋದು ಹೊಸ ಶಕ್ತಿ ನೀಡಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















