No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಭಂಡಾರಕೇರಿ ಮಠದಲ್ಲಿ ವೈಭವ | ಪ್ರಹ್ಲಾದಾಚಾರ್ಯರಿಗೆ ‘ಅಥರ್ವೋದ್ಘೋಷ ವಾಕ್ಪತಿ’ ಪ್ರಶಸ್ತಿ ಪ್ರದಾನ

kalpa News by kalpa News
August 8, 2026
in ಉಡುಪಿ
0
Udupi prahladacharya kanade atharvodghosha award udupi copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಸಂಸ್ಕೃತ ಪಾಠಶಾಲೆಯ ಉಪನ್ಯಾಸಕ ಹಾಗೂ ಖ್ಯಾತ ಪಂಡಿತ ಪ್ರಹ್ಲಾದಾಚಾರ್ಯ ಕಾನಡೆ ಅವರಿಗೆ ಭಂಡಾರಕೇರಿ ಮಠದ ಪ್ರತಿಷ್ಠಿತ ‘ಅಥರ್ವೋದ್ಘೋಷ ವಾಕ್ಪತಿ’ ರಾಷ್ಟ್ರೀಯ ಪ್ರಶಸ್ತಿಯನ್ನು ಉಡುಪಿ (Udupi) ಸಮೀಪದ ಬಾರಕೂರಿನ ಭಂಡಾರಕೇರಿಯಲ್ಲಿ ಪ್ರದಾನ ಮಾಡಲಾಯಿತು.

ಉಡುಪಿ ಸಮೀಪದ ಬಾರಕೂರಿನ ಭಂಡಾರಕೇರಿ ಮೂಲ ಮಠದಲ್ಲಿ ನಡೆಯುತ್ತಿರುವ 47ನೇ ಚಾತುರ್ಮಾಸ ವ್ರತ ಹಾಗೂ ಆದರ್ಶ ಕೀರ್ತಿಶೇಷ ಶ್ರೀ ವಿದ್ಯಾಮಾನ್ಯತೀರ್ಥರ ಪೀಠಾರೋಹಣ ಶತಮಾನೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ಶುಕ್ರವಾರ ರಾತ್ರಿ ಆಯೋಜಿಸಿದ್ದ ವಿಶೇಷ ವಿದ್ವತ್ ಸಭೆಯಲ್ಲಿ ಭಂಡಾರಕೇರಿ ಮಹಾ ಸಂಸ್ಥಾನದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಅಥರ್ವವೇದದ ಪಾರಾಯಣ ಹಾಗೂ ಮಂತ್ರಜಪದಲ್ಲಿ ಭಾಗವಹಿಸಿದ್ದ 10 ಮಂದಿ ವಿದ್ವಾಂಸರಿಗೆ ‘ಅಥರ್ವೋದ್ಘೋಷ ಸುಗ್ರೀವ’ ಮತ್ತು ‘ಅಥರ್ವೋದ್ಘೋಷ ಸುವ್ರತ’ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.

ವಿದ್ಯಾಮಾನ್ಯತೀರ್ಥರಿಗೆ ಗೌರವ ಸೂಚಕ ಕಾರ್ಯ

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನುಗ್ರಹ ಸಂದೇಶ ನೀಡಿದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ, ಸಮಗ್ರವಾಗಿ ಅಥರ್ವವೇದವನ್ನು ಅಧ್ಯಯನ ಮಾಡಿರುವ ವಿದ್ವಾಂಸರ ಸಂಖ್ಯೆ ಇತ್ತೀಚಿನ ವರ್ಷಗಳಲ್ಲಿ ಕಡಿಮೆಯಾಗುತ್ತಿರುವುದು ಆತಂಕದ ವಿಚಾರವಾಗಿದೆ ಎಂದು ಹೇಳಿದರು.

Also Read>> ಭದ್ರಾವತಿ : ಗುರುರಾಯರ ಆರಾಧನಾ ಮಹೋತ್ಸವ: ವಿವಿಧ ಸ್ಪರ್ಧೆಗಳ ಆಯೋಜನೆ

ಅಥರ್ವವೇದದಂತಹ ಪ್ರಾಚೀನ ವೇದ ಪರಂಪರೆಯನ್ನು ಉಳಿಸಿ ಬೆಳೆಸುವ ವಿದ್ವಾಂಸರನ್ನು ಗುರುತಿಸಿ ಗೌರವಿಸುವುದು ಮತ್ತು ಮುಂದಿನ ಪೀಳಿಗೆಗೆ ಭಾರತೀಯ ವೇದ ವಿದ್ಯೆಯನ್ನು ಪರಿಚಯಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ತಮ್ಮ ಗುರುಗಳಾದ ಶ್ರೀ ವಿದ್ಯಾಮಾನ್ಯತೀರ್ಥರು ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಿ, ಅವರನ್ನು ವಿದ್ವಾಂಸರನ್ನಾಗಿ ರೂಪಿಸಿದ ಮಹತ್ವದ ಸಾಧನೆಯನ್ನು ಸ್ಮರಿಸಿದ ಅವರು, ಅಂತಹ ಮಹನೀಯರ ಕೊಡುಗೆಯನ್ನು ಗೌರವಿಸುವ ಉದ್ದೇಶದಿಂದ ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.PES Shivamogga

“ನಮ್ಮ ಈ ಚಾತುರ್ಮಾಸದ ಸಂದರ್ಭದಲ್ಲಿ ರಾಷ್ಟ್ರದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸುತ್ತಿರುವ ಒಟ್ಟು ನೂರು ಮಂದಿ ವೇದ ವಿದ್ವಾಂಸರನ್ನು ಗುರುತಿಸಿ ಸನ್ಮಾನಿಸುವ ಮಹತ್ತರ ಉದ್ದೇಶ ಹೊಂದಿದ್ದೇವೆ. ವೇದ ಪರಂಪರೆಯ ಸಂರಕ್ಷಣೆ ಹಾಗೂ ವಿದ್ವಾಂಸರ ಪ್ರೋತ್ಸಾಹಕ್ಕೆ ಇದು ಒಂದು ಸಣ್ಣ ಪ್ರಯತ್ನ,” ಎಂದು ಶ್ರೀಗಳು ಹೇಳಿದರು.

ವಿದ್ಯಾದಾನ ಮಾಡಿದ ಗುರುಗಳಿಗೆ ಪ್ರಿಯವಾದ ಕಾರ್ಯ

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸೂರ್ಯನಾರಾಯಣ ಉಪಾಧ್ಯಾಯ ಮಾತನಾಡಿ, ವಿದ್ಯಾದಾನದ ಮೂಲಕ ಸಮಾಜಕ್ಕೆ ಅಪಾರ ಕೊಡುಗೆ ನೀಡಿದ ಶ್ರೀ ವಿದ್ಯಾಮಾನ್ಯತೀರ್ಥರಿಗೆ ಪ್ರಿಯವಾದ ಕಾರ್ಯವನ್ನು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ನಿರಂತರವಾಗಿ ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.Bhandarakeri Mathaವೇದ, ಸಂಸ್ಕೃತ ಹಾಗೂ ಭಾರತೀಯ ಪರಂಪರೆಯ ವಿದ್ಯೆಯನ್ನು ಉಳಿಸಿ ಬೆಳೆಸುವುದರ ಜೊತೆಗೆ ಸಂಸ್ಕಾರವಂತ ಸಮಾಜ ನಿರ್ಮಾಣಕ್ಕೆ ಭಂಡಾರಕೇರಿ ಮಠ ನೀಡುತ್ತಿರುವ ಕೊಡುಗೆ ಅನನ್ಯವಾಗಿದೆ ಎಂದು ಅವರು ಹೇಳಿದರು.

ಪ್ರಶಸ್ತಿ ಸ್ವೀಕರಿಸಿದ ವಿದ್ವಾಂಸರಿಂದ ಮೆಚ್ಚುಗೆ

ಸನ್ಮಾನ ಸ್ವೀಕರಿಸಿದ ವಿದ್ವಾಂಸರ ಪರವಾಗಿ ಮಲ್ಹಾರ ಆಚಾರ್ಯ ಹಾಗೂ ಲಕ್ಷ್ಮೀನಾರಾಯಣ ಭಟ್ಟ ಮಾತನಾಡಿದರು.

ಶ್ರೀ ವಿದ್ಯೇಶತೀರ್ಥ ಸ್ವಾಮೀಜಿಯವರ ಚಿಂತನೆ, ಕಾರ್ಯಕ್ಷಮತೆ ಹಾಗೂ ವಿದ್ವತ್ ವಲಯಕ್ಕೆ ಅವರು ನೀಡುತ್ತಿರುವ ನಿರಂತರ ಪ್ರೋತ್ಸಾಹವನ್ನು ಪ್ರಶಂಸಿಸಿದ ಅವರು, ವೇದಾಧ್ಯಯನ ಮತ್ತು ವೇದ ಪಾರಾಯಣದ ಪರಂಪರೆಯನ್ನು ಮುಂದುವರಿಸಲು ಇಂತಹ ಗೌರವಗಳು ವಿದ್ವಾಂಸರಿಗೆ ಹೆಚ್ಚಿನ ಪ್ರೇರಣೆ ನೀಡುತ್ತವೆ ಎಂದರು.

Udupi : 10 ವಿದ್ವಾಂಸರಿಗೆ ‘ಸುಗ್ರೀವ’, ‘ಸುವ್ರತ’ ಪ್ರಶಸ್ತಿ

ಭಂಡಾರಕೇರಿ ಮಠದಲ್ಲಿ ನಡೆಯುತ್ತಿರುವ ಚಾತುರ್ಮಾಸದ ಅಂಗವಾಗಿ ಚತುರ್ವೇದ ಪಾರಾಯಣ ಮಹಾಯಜ್ಞ ಸರಣಿಗೆ ಸಂಕಲ್ಪ ಮಾಡಲಾಗಿದೆ. ಇದರ ಭಾಗವಾಗಿ ಅಥರ್ವಣ ವೇದದ ಶೌನಕ ಶಾಖೆಯ ಪಾರಾಯಣ ಹಾಗೂ ರಾಮ-ಕೃಷ್ಣ ಮಂತ್ರ ಜಪ ಕಾರ್ಯಕ್ರಮಗಳು ಸಂಪನ್ನಗೊಂಡಿವೆ.

ಒಟ್ಟು ಒಂಬತ್ತು ದಿನಗಳ ಕಾಲ ನಡೆದ ಪಾರಾಯಣ ಮತ್ತು ಜಪ ಕಾರ್ಯಕ್ರಮದಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ಆಗಮಿಸಿದ್ದ ವಿದ್ವಾಂಸರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಕಿರಣಾಚಾರ್ಯ, ದಿನೇಶಾಚಾರ್ಯ, ಮುಕುಲಾಚಾರ್ಯ, ಸಚಿನ್ ಆಚಾರ್ಯ, ಮಲ್ಹಾರ ಆಚಾರ್ಯ, ದೇವಿದಾಸಾಚಾರ್ಯ ಹಾಗೂ ಪದ್ಮನಾಭ ಆಚಾರ್ಯ ಜೋಶಿ ಅವರಿಗೆ ‘ಅಥರ್ವೋದ್ಘೋಷ ಸುಗ್ರೀವ ಪ್ರಶಸ್ತಿ’ ಪ್ರದಾನ ಮಾಡಲಾಯಿತು.

ಅದೇ ರೀತಿ ಲಕ್ಷ್ಮೀನಾರಾಯಣ ಭಟ್ಟ ಹಾಗೂ ಸುಬ್ರಹ್ಮಣ್ಯ ಸರಳಾಯ ಅವರಿಗೆ ‘ಅಥರ್ವೋದ್ಘೋಷ ಸುವ್ರತ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

‘ವಿದ್ಯಾಪೀಠ ಕಲ್ಪವೃಕ್ಷ’ದಿಂದ ಸಮಾಜಕ್ಕೆ ಅಮೃತಫಲ

ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರು ಶ್ರೀ ವಿದ್ಯಾಮಾನ್ಯತೀರ್ಥರ ಶೈಕ್ಷಣಿಕ ಕೊಡುಗೆಯನ್ನು ಸ್ಮರಿಸಿದರು.

“ಫಲವತ್ತಾದ ಭೂಮಿಯಲ್ಲಿ ಬಿತ್ತಿದ ಬೀಜ ಉತ್ತಮ ಫಲವನ್ನೇ ನೀಡುತ್ತದೆ. ಅಂತೆಯೇ ಪೇಜಾವರ ಶ್ರೀ ವಿಶ್ವೇಶತೀರ್ಥರು ಪೂರ್ಣಪ್ರಜ್ಞ ವಿದ್ಯಾಪೀಠದ ಮೂಲಕ ಸಾವಿರಾರು ವಿದ್ವಾಂಸರನ್ನು ನಿರ್ಮಿಸಿದರು. ವಿದ್ಯಾಪೀಠ ಕಲ್ಪವೃಕ್ಷದ ಮೂಲಕ ಅಮೃತಫಲವನ್ನೇ ಸಮಾಜಕ್ಕೆ ನೀಡಲಾಗುತ್ತಿದೆ. ಇದಕ್ಕೆಲ್ಲಾ ಶ್ರೀ ವಿದ್ಯಾಮಾನ್ಯತೀರ್ಥರೇ ಪ್ರೇರಣಾ ಶಕ್ತಿಯಾಗಿದ್ದಾರೆ. ಅಂಥ ಗುರುಗಳು ನಿರ್ಮಿಸಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗಬೇಕು.”
–
ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ, ಭಂಡಾರಕೇರಿ ಮಹಾ ಸಂಸ್ಥಾನ

ವೇದ ಪರಂಪರೆ ಸಂರಕ್ಷಣೆಗೆ ಮತ್ತಷ್ಟು ಒತ್ತು

ಭಂಡಾರಕೇರಿ ಮಠದ ಚಾತುರ್ಮಾಸ ಕಾರ್ಯಕ್ರಮದ ಅಂಗವಾಗಿ ವೇದಾಧ್ಯಯನ, ಪಾರಾಯಣ, ಮಂತ್ರಜಪ ಹಾಗೂ ವಿದ್ವಾಂಸರ ಸನ್ಮಾನಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಅಥರ್ವವೇದ ಸೇರಿದಂತೆ ಚತುರ್ವೇದಗಳ ಅಧ್ಯಯನ ಮತ್ತು ಪಾರಾಯಣ ಪರಂಪರೆಯನ್ನು ಮುಂದಿನ ಪೀಳಿಗೆಗೂ ಕೊಂಡೊಯ್ಯುವ ನಿಟ್ಟಿನಲ್ಲಿ ಮಠ ಕೈಗೊಂಡಿರುವ ಕಾರ್ಯಕ್ರಮಗಳು ಗಮನ ಸೆಳೆಯುತ್ತಿವೆ.

ಬಾರಕೂರಿನ ಭಂಡಾರಕೇರಿ ಮಠದಲ್ಲಿ ನಡೆದ ಈ ಸಮಾರಂಭದಲ್ಲಿ ವೇದ ವಿದ್ವಾಂಸರು, ಭಕ್ತರು ಹಾಗೂ ಗಣ್ಯರು ಭಾಗವಹಿಸಿದ್ದರು. ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ವೇದ ವಿದ್ಯೆ ಮತ್ತು ವಿದ್ವತ್ ಪರಂಪರೆಗೆ ಗೌರವ ಸಲ್ಲಿಸುವ ವಿಶೇಷ ಸಂದರ್ಭವಾಗಿ ಪರಿಣಮಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kumadvathi College ShikariuraKalpa News Advertising DisclaimerKalahamsa Infotech private limited

Tags: Art of LivingBarakuruBENGALURUBhandarakeri MathChaturmasyaChaturmasya 2026coastal newsKannada News WebsiteLatest News KannadaSri Vidyeshathirtha SwamijiUdupiಆರ್ಟ್ ಆಫ್ ಲಿವಿಂಗ್ಉಡುಪಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ! ರೈಲ್ವೆ ಹಳಿ ದಾಟಿ ಅಂತ್ಯಸಂಸ್ಕಾರ

Next Post

SWR GM Ananth Inspects Mysuru Division Projects Passenger Service

kalpa News

kalpa News

Next Post
South Western Railway (SWR) GM P Ananth Mysore Division Inspection

SWR GM Ananth Inspects Mysuru Division Projects Passenger Service

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL