ಕಲ್ಪ ಮೀಡಿಯಾ ಹೌಸ್ | ಉಡುಪಿ |
ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ ಹಲವರಿಗೆ ಗಂಭೀರ ಗಾಯಗೊಂಡ ಘಟನೆ ಉದ್ಯಾವರ ಬಲೈಪಾದೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮದ್ಯಾಹ್ನ ನಡೆದಿದೆ.
ಮಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ ಉದ್ಯಾವರ ಬಲೈಪಾದೆಯ ಜುಂಕ್ಷನ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಹೊಡೆದು ರಸ್ತೆಗೆ ಉರುಳಿ ಬಿದ್ದಿದ್ದು, ಬಸ್ ನಲ್ಲಿದ್ದ ಹಲವಾರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ಬಸ್ ಚಾಲಕನ ನಿರ್ಲಕ್ಷ ಹಾಗೂ ಅಜಾಗರೂಕತೆ ಕಾರಣ ಎಂದು ತಿಳಿದುಬಂದಿದೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ಪ್ರಮೋದ್ ಹಾಗೂ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















