ಕಲ್ಪ ಮೀಡಿಯಾ ಹೌಸ್ | ಉಡುಪಿ |
ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿಯ ಮೇಲೆ ಅತ್ಯಾಚಾರ #Rape ನಡೆಸಿರುವ ಘಟನೆ ಕಾರ್ಕಳದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.
ಅಲ್ತಾಫ್ ಬಂಧಿತ ಆರೋಪಿಯಾಗಿದ್ದು, ಯುವತಿಯ ಪೋಷಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿ, ಈತನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Also read: ಪ್ರತಿಭಾವಂತರಾಗಿ, ಬಾಹ್ಯಾಕಾಶ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡಿ
ಸಂತ್ರಸ್ತ ಯುವತಿಗೆ ಅಲ್ತಾಫ್ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದನು. ನಂತರ ಯುವತಿಯನ್ನು ಪುಸಲಾಯಿಸಿ ಸುತ್ತಾಡಲು ಆರೋಪಿ ಕರೆದುಕೊಂಡು ಹೋಗಿದ್ದಾನೆ. ನಂತರ ಇಬ್ಬರು ಸ್ನೇಹಿತರಿಗೆ ಹೇಳಿ ಬಿಯರ್ ಬಾಟಲಿ ತರಿಸಿ, ಅದರಲ್ಲಿ ಮಾದಕ ವಸ್ತು ಬೆರೆಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಯನ್ನು ಮನೆ ಸಮೀಪ ಬಿಟ್ಟು ಹೋಗಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post