ಕಲ್ಪ ಮೀಡಿಯಾ ಹೌಸ್ | ಉಡುಪಿ/ಶಿವಮೊಗ್ಗ |
ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಧಾರಾವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯ ಒಂದೆರಡು ಕಡೆ ಮಿಂಚು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಈಗ ಮಳೆಗೆ ಕಾರಣವೇನು?
ವಾತಾವರಣದಲ್ಲಿ ಬಿಸಿಲ ಪ್ರಮಾಣ ಹೆಚ್ಚಾಗಿ ಹಾಗೂ ಸಮುದ್ರದಲ್ಲಿ ಮೇಲ್ಮೆ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ವಿವಿಧೆಡೆ ಮಳೆ ಸುರಿಯಲು ಕಾರಣವಾಗಿದೆ ಎಂದು ಹೇಳಲಾಗಿದೆ.
ಎಲ್ಲಿ ಎಷ್ಟು ಮಳೆಯಾಯ್ತು?
ಇನ್ನು ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ಜಯಪುರದಲ್ಲಿ ರಾಜ್ಯದಲ್ಲೆ ಅತಿ ಹೆಚ್ಚು 3 ಸೆಂಮೀ ಮಳೆಯಾಗಿರುವ ವರದಿಯಾಗಿದೆ.
ಬಾಳೆಹೊನ್ನೂರಿನಲ್ಲಿ 2 ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಾನ್ಮನೆ ಹಾಗೂ ಶಿವಮೊಗ್ಗದ ಹುಂಚದಕಟ್ಟೆ, ಕೊಡಗಿನ ಸುಂಟಿಕೊಪ್ಪದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಚಿಕ್ಕಮಗಳೂರಿನ ಅಣ್ಣಿಗೆರೆಯಲ್ಲಿ 5 ಸೆಂಮೀವರೆಗೆ ಮಳೆಯಾದ ವರದಿಯಾಗಿದೆ. ಉಳಿದಂತೆ ಶಿವಮೊಗ್ಗ, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ಉತ್ತರ ಕನ್ನಡ, ದಾವಣಗೆರೆ, ಧಾರವಾಡ ಜಲ್ಲೆಯ ಕೆಲವು ಪ್ರದೇಶದಲ್ಲಿ ಮಳೆಯಾದ ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post