ಕಲ್ಪ ಮೀಡಿಯಾ ಹೌಸ್ | ಉಡುಪಿ/ಶಿವಮೊಗ್ಗ |
ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಹಾಗೂ ಶಿವಮೊಗ್ಗ ಸೇರಿ ಐದು ಜಿಲ್ಲೆಗಳಲ್ಲಿ ಸೆ.8ರ ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯಂತೆ ಸೆ.8ರ ನಾಳೆ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಯಾವತ್ತು, ಎಲ್ಲೆಲ್ಲಿ ಅಲರ್ಟ್?
ಸೆ.9: ಬೆಳಗಾಂ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಜಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಗುಲ್ಬರ್ಗಾ, ರಾಯಚೂರು, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಮಂಡ್ಯ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
ಸೆ.10: ಬೆಳಗಾಂ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ , ಬೀದರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಗುಲ್ಬರ್ಗಾ, ಯಾದಗಿರಿ, ಕೊಪ್ಪಳ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
ಸೆ.11: ಬೆಳಗಾಂ, ಹಾವೇರಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.
Also read: ಭದ್ರಾವತಿ ಹಿಂದೂ ಮಹಾಸಭಾ ಗಣಪತಿ 50ನೆಯ ವರ್ಷಾಚರಣೆ ಸಂಭ್ರಮ: ಉತ್ಸವಕ್ಕೆ ಹೇಗಿದೆ ಸಿದ್ದತೆ?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post