ಕಲ್ಪ ಮೀಡಿಯಾ ಹೌಸ್ | ಉಡುಪಿ |
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರದ ಪ್ರತಿಷ್ಠಿತ ಡಾ ಬಿ. ಬಿ. ಹೆಗಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಎಸ್. ಎಲ್ . ಭೋಜೆಗೌಡ #Bojegowda ಮತ್ತು ಪದವೀಧರ ಕ್ಷೇತ್ರದ ಡಾ. ಧನಂಜಯ ಸರ್ಜಿ #Dhananjaya Sarji ಅವರು ಮತಯಾಚಿಸಿದರು.
ಈ ಸಂಧರ್ಭದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ದೇಶದ ಭದ್ರತೆಗೆ, ಸುಭದ್ರತೆಗೆ ದಿಟ್ಟ ಉತ್ತರ ಎಂದರೆ ಅದು ಭಾರತೀಯ ಜನತಾ ಪಾರ್ಟಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಎಸ್. ಎಲ್ . ಭೋಜೇಗೌಡರು ಪದವೀಧರರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ ಯಾದ ನಾನು ಸ್ಪರ್ದಿಸುತ್ತಿದ್ದೇವೆ. ನೀವೆಲ್ಲರೂ ನಮ್ಮಬ್ಬಿರ ಪರವಾಗಿ ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರ ಬಳಿ ಮತಯಾಚಿಸಿ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವಂತೆ ಕುಂದಾಪುರದ ಪ್ರತಿಷ್ಠಿತ ಡಾ. ಬಿ. ಬಿ.ಹೆಗಡೆ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್. ಎಲ್ . ಬೋಜೆಗೌಡ , ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್ . ಮಾಲತೇಶ್ , ಹರಿಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Also read: ಸೊರಬ | ಕ್ಷೀರ ರುದ್ರ ದೇವರ ಬ್ರಹ್ಮ ರಥೋತ್ಸವ | ಶ್ರೀ ರಂಗನಾಥನ ದರ್ಶನಕ್ಕೆ ಭಕ್ತ ಸಾಗರ
ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತಯಾಚನೆ
ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಗುರುವಾರ ಉಡುಪಿಯ ಬರಕೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ರುಕ್ಮಿಣಿ ಶೆಡ್ತಿ ಸ್ಮಾರಕ ರಾಷ್ಟ್ರೀಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್ ಎಲ್ ಬೋಜೆಗೌಡ ಅವರು ಭೇಟಿ ನೀಡಿ ಅಲ್ಲಿನ ಉಪನ್ಯಾಸಕರು , ಸಿಬ್ಬಂದಿವರ್ಗ ಮತ್ತು ಪದವಿಧರರಲ್ಲಿ ಮತಯಾಚಿಸಿದರು.
ಈ ಸಂಧರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ್ ಪೂಜಾರಿ , ವಿಧಾನ ಪರಿಷತ್ ಸದಸ್ಯರಾದ ಡಿ. ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ , ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುಧೀರ್ ಕೆ ಎಸ್ , ಸತೀಶ್ ಪೂಜಾರಿ ವಕ್ವಾಡಿ , ಉಡುಪಿ ಜಿಲ್ಲಾ ಉಪಾಧ್ಯಕ್ಶರಾದ ಸುರೇಶ್ ಶೆಟ್ಟಿ ಕಾಡೂರು,ಉಡುಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪೃಥ್ವಿ ಶೆಟ್ಟಿ , ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಜಿ ಸುವರ್ಣ , ಸುಪ್ರದ ಶೆಟ್ಟಿ , ಬಿಜೆಪಿ ಮುಖಂಡರಾದ ರಾಜೇಶ್ ಕಾವೇರಿ, ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಿ. ಎಚ್. ಮಾಲತೇಶ್ , ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post