ಕಲ್ಪ ಮೀಡಿಯಾ ಹೌಸ್ | ಉಡುಪಿ |
ಮೂವರು ಮಕ್ಕಳು ಸೇರಿದಂತೆ ನಾಲ್ವರನ್ನು ಬರ್ಬರವಾಗಿ ಹತ್ಯೆ #Murder ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿ ಅರುಣ್ ಚೌಗಲೆ(39) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ ತನಿಖೆ ಮಹತ್ವದ ಹಂತ ತಲುಪಿದೆ.
ಪ್ರಕರಣದ ಬೆನ್ನು ಹತ್ತಿದ ಉಡುಪಿ #Udupi ಪೊಲೀಸರು, ಸಿಸಿಟಿವಿ ದೃಶ್ಯಾವಳಿ #CCTV ಹಾಗೂ ಫೋನ್ ಕರೆಗಳ ಜಾಡು ಹಿಡಿದು ಮಹಾರಾಷ್ಟ್ರದ #Maharastra ಸಾಂಗ್ಲಿ ಮೂಲದ ಶಂಕಿತ ವ್ಯಕ್ತಿಯನ್ನು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ.

ವಿಚಾರಣೆಯಲ್ಲಿ ಈ ಕೊಲೆ ಪ್ರಕರಣದಲ್ಲಿ ಆತನ ಪಾತ್ರ ಕಂಡುಬಂದಲ್ಲಿ ಆತನನ್ನು ಬಂಧಿಸಿ ಕಾನೂನು ಪ್ರಕಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದರು.

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಸುಮಾರು 20 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post