ಕಲ್ಪ ಮೀಡಿಯಾ ಹೌಸ್ | ಉಡುಪಿ |
ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಹೊರಗೆ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ #Manipal ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ನಿವಾಸಿ ಗುರುರಾಜ್ (32) ಮೃತ ವ್ಯಕ್ತಿ. ಶುಕ್ರವಾರ ಅಣ್ಣನ ಸ್ನೇಹಿತನೊಂದಿಗೆ ತನ್ನ ತಂದೆಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ #KMC Hospital ದಾಖಲಿಸಿ, ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಮಲಗಿದ್ದರು. ಬೆಳಗಾಗುವಷ್ಟರಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ.
Also read: ಚಳ್ಳಕೆರೆ: ಸಿಡಿಲು ಬಡಿದು 106 ಕುರಿಗಳ ಧಾರುಣ ಸಾವು
ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಲಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post