ಕಲ್ಪ ಮೀಡಿಯಾ ಹೌಸ್ | ಉಡುಪಿ |
ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ (48) ಸೋಮವಾರ ರಾತ್ರಿ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ #Railway Track ತಲೆಕೊಟ್ಟು ಆತ್ಮಹತ್ಯೆ #Suicide ಶರಣಾಗಿದ್ದಾರೆ.
ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದರು. ಹೆಬ್ರಿ ತಾಲೂಕು ನಿವಾಸಿಯಾಗಿರುವ ಸುದೀಪ್, ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸಂಬಂಧ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ತನಿಖೆ ಪ್ರಾರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post