ಕಲ್ಪ ಮೀಡಿಯಾ ಹೌಸ್ | ಉಡುಪಿ |
ಖ್ಯಾತ ರಂಗಕರ್ಮಿ, ಚಿತ್ರನಟ ರಾಜು ತಾಳಿಕೋಟೆ ಹೃದಯಾಘಾತದಿಂದಾಗಿ ಉಡುಪಿ ಮಣಿಪಾಲ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.
ನಿನ್ನೆ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಉತ್ತರ ಕರ್ನಾಟಕದ ಹಿರಿಯ ಪ್ರತಿಭೆ ರಾಜು ತಾಳಿಕೋಟೆ ಧಾರವಾಡ ರಂಗಾಯಣದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ರಾಜು ತಾಳಿಕೋಟೆ ಅವರು ಕೇವಲ ನಟನಾಗಿರದೇ ತಾಳಿಕೋಟೆಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು.
2009ರಲ್ಲಿ ದಿಗಂತ್ ಅಭಿನಯದ `ಮನಸಾರೆ’ ಚಿತ್ರದ ಮೂಲಕ ಅವರು ಜನಪ್ರಿಯತೆ ಗಳಿಸಿದ ರಾಜು, ನಂತರ ಪಂಚರಂಗಿ’, ಮತ್ತೊಂದ್ ಮದುವೇನಾ..!’ ಮತ್ತು ಮೈನಾ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಹಾಸ್ಯ ಶೈಲಿಯ ಮೂಲಕ ಪ್ರೇಕ್ಷಕರ ಗಮನ ಸೆಳೆದಿದ್ದರು.
ಕುಡುಕನ ಪಾತ್ರಗಳಲ್ಲಿ ಮನೋಜ್ಞವಾಗಿ ಅಭಿನಯಿಸುತ್ತಿದ್ದ ಇವರ ಭಿಕಲಿಯುಗದ ಕುಡುಕ’, ಕುಡುಕರ ಸಾಮ್ರಾಜ್ಯ’, ಮತ್ತು ಅಸಲಿ ಕುಡುಕ’ ಬಹಳ ಫೇಮಸ್ ಆಗಿದ್ದವು. ಈ ನಾಟಕಗಳ ಆಡಿಯೋ ಕ್ಯಾಸೆಟ್’ಗಳು ಕೂಡ ಆ ಕಾಲದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿದ್ದವು.
ರಾಜು ತಾಳಿಕೋಟೆಯವರ ಯವರ ನಿಧನಕ್ಕೆ ಕನ್ನಡ ಚಿತ್ರರಂಗ ಮತ್ತು ಉತ್ತರ ಕರ್ನಾಟಕದ ರಂಗಭೂಮಿ ಕಂಬನಿ ಮಿಡಿದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post