ಕಲ್ಪ ಮೀಡಿಯಾ ಹೌಸ್ | ಉಡುಪಿ |
ಮದುವೆ ಆರತಕ್ಷತೆ ಸಮಾರಂಭಲ್ಲಿ ಕುರ್ಚಿಯ ಮೇಲಿಟ್ಟ ಲಕ್ಷಾಂತರ ಮೌಲ್ಯದ ವಸ್ತುಗಳಿದ್ದ ಬ್ಯಾಗ್ ನ್ನು ಕಳುವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ನೀಲಾವರದ ಜಯಶ್ರೀ ಸುರೇಶ್ ಎಂಬವರ ಮಗಳು ಸಮೀಕ್ಷಾಳ ಮದುವೆ ಆರತಕ್ಷತೆ ಸಮಾರಂಭ ಬ್ರಹ್ಮಾವರ ಶ್ಯಾಮಿಲಿ ಶನಾಯ ಹಾಲ್ನಲ್ಲಿ ನಡೆದಿದ್ದು, ಈ ವೇಳೆ ಜಯಶ್ರೀ ತನ್ನ ಕೈಯಲ್ಲಿದ್ದ ಬ್ಯಾಗನ್ನು ಹಾಲ್ ಸ್ಟೇಜ್ನ ಕುರ್ಚಿಯ ಮೇಲೆ ಇಟ್ಟು ಮಗಳೊಂದಿಗೆ ಫೋಟೋ ತೆಗೆಸಿದ್ದರು. ಬಳಿಕ ಬಂದು ನೋಡಿದಾಗ ಬ್ಯಾಗ್ ಕಳವಾಗಿರುವುದು ಕಂಡು ಬಂದಿದೆ.
Also read: ದತ್ತು ಸ್ವೀಕಾರ: ದಂಪತಿಗೆ ಮಗು ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಬ್ಯಾಗ್ನಲ್ಲಿ 2,40,000 ರೂ. ಮೌಲ್ಯದ ನಗದು ಹಾಗೂ ವಸ್ತುಗಳಿದ್ದವು ಎಂದು ತಿಳಿದುಬಂದಿದೆ. ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post