ಕಲ್ಪ ಮೀಡಿಯಾ ಹೌಸ್ | ಉಡುಪಿ |
ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಜೂರು ಮಸೀದಿ ಬಳಿ ನಡೆದಿದೆ.
ಪಾದೂರಿನ ಕೂರಾಲಿನ ಪುಷ್ಪಾ (49) ಮತ್ತೊಬ್ಬ ಪುರುಷ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಆಟೋ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿರ್ವದಿಂದ ಕಾಪು ಕಡೆ ಸಂಚರಿಸುತ್ತಿರುವಾಗ ಘಟನೆ ಸಂಭವಿಸಿದ್ದು, ಏಕಾಏಕಿ ಆರಂಭವಾದ ಬಿರುಗಾಳಿ, ಸಿಡಿಲು, ಮಳೆಯಿಂದಾಗಿ ಬೃಹತ್ ಗಾತ್ರದ ಮರ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















