ಕಲ್ಪ ಮೀಡಿಯಾ ಹೌಸ್ | ಉಡುಪಿ |
ಇಲ್ಲಿನ ಶ್ರೀಕೃಷ್ಣ ಮಠದಲ್ಲಿ #Shri Krishna Mutt ನೂತನವಾಗಿ ನಿರ್ಮಿಸಲಾಗಿರುವ ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು #Kaasta Yali ಅ.9ರಂದು ಉದ್ಘಾಟಿಸಲಾಗುತ್ತಿದೆ.
ಈ ಕುರಿತಂತೆ ಈ ಕುರಿತಂತೆ ಮಾಹಿತಿ ನೀಡಿರುವ ಶ್ರೀಮಠದ ದಿವಾನರಾದ ನಾಗರಾಜ ಆಚಾರ್ಯ ಹಾಗೂ ಕಾರ್ಯದರ್ಶಿ ಪ್ರಸನ್ನಾಚಾರ್ಯ, ನೂತನ ಯಾಳಿಯನ್ನು ಹೊಸ್ತಿಲ ಹುಣ್ಣಿಮೆಯ ಪರ್ವದಿನದಂದು ಆ.9ರಂದು ಬೆಳಿಗ್ಗೆ ಮಹಾಪೂಜೆಯ ಬಳಿಕ 10 ಗಂಟೆಗೆ ರಾಜ್ಯಸಭಾ ಸದಸ್ಯೆ, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಉದ್ಘಾಟಿಸುವರು. ಬಳಿಕ ರಾಜಾಂಗಣದಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಇನ್ಫೋಸಿಸ್ ಫೌಂಡೇಶನ್ ಪ್ರವರ್ತಕರಾದ ಸುಧಾ ಮೂರ್ತಿ ಮತ್ತು ನಿವೃತ್ತ ಮುಖ್ಯ ನ್ಯಾಯಾಧೀಶ ದಿನೇಶ್ ಕುಮಾರ್ ಅವರು ಪಾಲ್ಗೊಳ್ಳಲಿದ್ದಾರೆ. ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು, ಅದಮಾರು ಮಠಾಧೀಶ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಮತ್ತು ಪುತ್ತಿಗೆ ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸುವರು ಎಂದು ತಿಳಿಸಿದ್ದಾರೆ.

ಕನಕ ಗೋಪುರಕ್ಕೆ ಹೊಂದಿಕೊಂಡಿರುವ ಚಂದ್ರಶಾಲೆ ಸಹಿತ ಮಧ್ವ ಸರೋವರದ ವರೆಗೆ ಶ್ರೀಕೃಷ್ಣ ಆಲಯದ ಮೇಲ್ಛಾವಣಿಗೆ ಪ್ರಾಚೀನ ವಾಸ್ತುಶೈಲಿಯ ರೂಪ ನೀಡಲಾಗಿದೆ. ಆ ಮೂಲಕ ಕೃಷ್ಣಮಠದ ದಿವ್ಯ ಸೌಂದರ್ಯವನ್ನು ಭವ್ಯಗೊಳಿಸಲಾಗಿದೆ.

ಬಿಡುವಿನ ವೇಳೆಯಲ್ಲಿ ಮಹಿಳೆಯರಿಗೆ ಲಕ್ಷ್ಮಿ ಶೋಭಾನೆ, ಭಗವದ್ಗೀತೆ, ವಿವಿಧ ಶ್ಲೋಕಗಳನ್ನು ಮಾತ್ರವಲ್ಲದೇ ರಂಗೋಲಿ, ಹೂಕಟ್ಟುವುದು, ಬತ್ತಿ ಹೊಸೆಯುವುದು ಇತ್ಯಾದಿ ಧಾರ್ಮಿಕ ಚಟುವಟಿಕೆಗಳನ್ನು ಮಹಿಳಾ ವಿದ್ಯಾಪೀಠದಲ್ಲಿ ಅನುಭವಿ ಮಹಿಳೆಯರು ತಿಳಿಸಿಕೊಡುವರು ಎಂದು ಪರ್ಯಾಯ ಪುತ್ತಿಗೆ ಮಠದ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post