ಕಲ್ಪ ಮೀಡಿಯಾ ಹೌಸ್ | ಉಡುಪಿ |
ಜಿಲ್ಲೆಯ ಯುವ ಜನರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ, ಉದ್ಯೋಗ ಪಡೆಯಲು ಆನ್‌ಲೈನ್ ಸ್ಪರ್ಧಾತ್ಮಕ ತರಬೇತಿಯನ್ನು ಆರಂಭಿಸಿದ್ದು, ಇದರ ಲಾಭ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕೆಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್ Lakshmi Hebbalkar ತಿಳಿಸಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‌ಲೈನ್ ತರಬೇತಿಯ ನೋಂದಣಿಗಾಗಿ ಸಿದ್ಧಪಡಿಸಲಾದ ಮೊಬೈಲ್ ಆಪ್‌ಗೆ ಚಾಲನೆ ನೀಡಿ ಮಾತನಾಡಿದರು.

Also read: ಜಿಲ್ಲೆಯ ಜನರ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್
ಕಲಿಯಬೇಕು ಎಂಬ ಬಯಕೆ ಇರುವ ಮಕ್ಕಳು ಆಪ್ ಮೂಲಕ ಈ ತರಬೇತಿ ಹೊಂದಲು ನೋಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಿ ಎಂದ ಅವರು, ಬುದ್ದಿವಂತ ಜಿಲ್ಲೆ ಉಡುಪಿಯಲ್ಲಿ ಹೆಚ್ಚು ಜನರು ಅಧಿಕಾರಿಗಳಾಗಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.











Discussion about this post