ಕಲ್ಪ ಮೀಡಿಯಾ ಹೌಸ್ | ಉಡುಪಿ |
ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಹಿಡನ್ ಕ್ಯಾಮೆರಾ ಇಟ್ಟು ವಿದ್ಯಾರ್ಥಿನಿಯರ ವಿಡಿಯೋಗಳನ್ನು ಮಾಡಲಾಗಿದೆ ಎಂಬ ಕುರಿತಾಗಿ ಯಾವುದೇ ರೀತಿಯ ಕುರುಹುಗಳ ನಮಗೆ ದೊರೆತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚೀಂದ್ರ SP Akshay Machindra ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿರುವ ಅವರು, ಹಿಡನ್ ಕ್ಯಾಮೆರಾ ಇಟ್ಟು ವೀಡಿಯೋ ಮಾಡಿರುವ ಕುರಿತಾಗಿ ನಮಗೆ ಯಾವುದೇ ಕುರುಹುಗಳು ದೊರೆತಿಲ್ಲ. ಘಟನೆಗೆ ಸಂಬಂಧಪಟ್ಟಂತೆ ಯಾವುದೇ ವಿಡಿಯೋ ನಮಗೆ ಸಿಕ್ಕಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಕೂಡಾ ನಮ್ಮ ಗಮನಕ್ಕೆ ಬಂದಿಲ್ಲ. ಹೀಗಾಗಿ ಸಾರ್ವಜನಿಕರು ಊಹಾಪೋಹದ ಮಾಹಿತಿಗಳನ್ನು ನಂಬಬಾರದು ಎಂದಿದ್ದಾರೆ.

Also read: ಉಡುಪಿ ವಿದ್ಯಾರ್ಥಿನಿಯರ ವೀಡಿಯೋ ಮಾಡಿದ್ದ ಯುವತಿಯರ ಬಂಧನಕ್ಕೆ ಆಗ್ರಹ
ಘಟನೆಗೆ ಸಂಬಂಧಪಟ್ಟಂತೆ ಕಾಲೇಜು ಆಡಳಿತ ಮಂಡಳಿ ಶಿಸ್ತು ಕ್ರಮ ಕೈಗೊಂಡಿದೆ. ಇದನ್ನು ಮೋಜಿಗಾಗಿ ಮಾಡಲಾಗಿದ್ದು ನಂತರ ವೀಡಿಯೊಗಳನ್ನು ಅಳಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಕಾಲೇಜು ಆಡಳಿತದೊಂದಿಗೆ ಹೇಳಿದ್ದಾರೆ.

ರಶ್ಮಿ ಸಾವಂತ್ ಹೆಸರಿನಲ್ಲಿ ಟ್ವೀಟ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಅವರು, ಟ್ವಿಟ್ಟರ್ ಖಾತೆಯವರು ಸತ್ಯಾಸತ್ಯತೆಯನ್ನು ಪರಿಶೀಲಿಸಲು ಬಯಸಿದ್ದರು. ಬಿಟ್ಟರೆ ಬೇರೆ ಯಾವ ಉದ್ದೇಶವೂ ಇರಲಿಲ್ಲ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post