ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೈಂದೂರು: ಕೋವಿಡ್‌ಗೆ ಲಸಿಕೆ ಕಂಡುಹಿಡಿದ ದೇಶ ನಮ್ಮ ಭಾರತ. ಆರೋಗ್ಯದ ಬಗ್ಗೆ ಯಾರೊಬ್ಬರೂ ನಿರ್ಲಕ್ಷ್ಯ ಮಾಡದೆ ಕೊರೋನಾ ಲಸಿಕೆ ಪಡೆಯಿರಿ ಎಂದು ಶಾಸಕ ಸುಕುಮಾರ ಶೆಟ್ಟಿ ಸಲಹೆ ನೀಡಿದರು.
ಅವರು ಇಂದು ಕೊರೋನಾ ಲಸಿಕೆ ಪಡೆದ ಸಂದರ್ಭದಲ್ಲಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇದನ್ನು ಉಚಿತವಾಗಿ ನೀಡಲಾಗುತ್ತಿದ್ದು, ಪ್ರತಿಯೊಬ್ಬರು ಯಾವುದೇ ಹಿಂಜರಿಕೆಯಿಲ್ಲದೆ ಲಸಿಕೆ ಪಡೆದು ಕೊರೋನಾ ಮುಕ್ತರಾಗೋಣ ಎಂದು ಹೇಳಿದರು.
ಕೊರೋನಾ ಲಸಿಕೆ ಕುರಿತು ಇರುವ ವದಂತಿಗಳಿಗೆ ಕಿವಿಗೊಡದೆ ಆರೋಗ್ಯದ ಹಿತದೃಷ್ಟಿಯಿಂದ ಸ್ವಪ್ರೇರಿತರಾಗಿ ಲಸಿಕೆ ಪಡೆಯಲು ಮುಂದಾಗಿ ಎಂದು ಕರೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post