ಕಲ್ಪ ಮೀಡಿಯಾ ಹೌಸ್ | ಉಡುಪಿ |
ಉಡುಪಿಯ ವಿದ್ಯೋದಯ ಪಿ.ಯು ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಯೋಗ ಸ್ಪರ್ಧೆಯಲ್ಲಿ #Yoga Competition ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ #Creative PU College ವಿದ್ಯಾರ್ಥಿಗಳಾದ ಅರ್ಥಮ್ ಎ. ಶೆಟ್ಟಿ ಹಾಗೂ ರಕ್ಷಕ್ ಎಸ್. ಗೌಡ ಇವರು ಕಲಾತ್ಮಕ ಯೋಗ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಂಪ್ರದಾಯಿಕ ಯೋಗ ಸ್ಪರ್ಧೆಯಲ್ಲಿ ಜಾಹ್ನವಿ ಜೆ. ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಹಾಗೂ ಅರ್ಥಮ್ ಎ. ಶೆಟ್ಟಿ ರವರು ತೃತೀಯ ಸ್ಥಾನದೊಂದಿಗೆ ಕಂಚಿನ ಪದಕ ವಿಜೇತರಾಗಿದ್ದಾರೆ.
ಪ್ರಥಮ ಸ್ಥಾನಿಗಳಾದ ಅರ್ಥಮ್ ಎ. ಶೆಟ್ಟಿ ಹಾಗೂ ರಕ್ಷಕ್ ಎಸ್. ಗೌಡರವರು ಹಾವೇರಿಯಲ್ಲಿ ನಡೆಯುವ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವರ್ಗದವರು ಶ್ಲಾಘಿಸಿ, ಅಭಿನಂದಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















