ಕಲ್ಪ ಮೀಡಿಯಾ ಹೌಸ್ | ಮೈಸೂರು/ಕಾರವಾರ |
ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು #Mysore ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು-ಕಾರವಾರ ನಡುವೆ ವಿಶೇಷ ರೈಲು ಸೇವೆಯನ್ನು ಇಲಾಖೆ ಒದಗಿಸಲಿದ್ದು, ಅವುಗಳ ವಿವರ ಇಂತಿದೆ.
Also Read>> ರಾಷ್ಟ್ರ ಕಟ್ಟುವಲ್ಲಿ ವಕೀಲರ ಪಾತ್ರ ಮಹತ್ವದ್ದು: ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ
ರೈಲು ಸಂಖ್ಯೆ 06203 ಮೈಸೂರು-ಕಾರವಾರ ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಸಂಜೆ 4.15ಕ್ಕೆ ಕಾರವಾರ #Karwar ತಲುಪಲಿದೆ. ಪುನಃ ಇದೇ ರೈಲು (06204) ಮಾರ್ಚ್ 29ರಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು, ಮರುದಿನ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಎಸ್’ಆರ್ ಬೆಂಗಳೂರು, ಯಶವಂತಪುರ, ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
Also Read>> ಸುನೀತಾ ವಿಲಿಯಮ್ಸ್ ಮರಳಿ ಭೂಮಿಗೆ ಹಿನ್ನೆಲೆ: ಸಿಹಿ ಹಂಚಿ ಸಂಭ್ರಮಾಚರಣೆ
ಯಾವೆಲ್ಲಾ ಬೋಗಿಗಳಿರುತ್ತವೆ?
ಈ ರೈಲು 1 ಎಸಿ 2 ಟೈರ್ ಕಮ್ ಎಸಿ 3 ಟೈರ್, 3 ಎಸಿ 3 ಟೈರ್, 13 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್’ಎಲ್’ಆರ್/ ಡಿ ಬೋಗಿಗಳು ಸೇರಿದಂತೆ 21 ಬೋಗಿಗಳನ್ನು ಒಳಗೊಂಡಿರುತ್ತದೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್’ಸೈಟ್’ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್’ಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post