ಕಲ್ಪ ಮೀಡಿಯಾ ಹೌಸ್
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ ಕೋವಿಡ್ 19 ಮುಂಜಾಗ್ರತಾ ಕಾರ್ಯಕ್ರಮದಡಿಲ್ಲಿ ಪಂಚಾಯತ್ ವ್ಯಾಪ್ತಿಯ ಟಾಸ್ಕ್ ಪೋರ್ಸ್ ಸಭೆ ಪಂಚಾಯತ್ ಸುವರ್ಣ ಸೌಧ ಸಭಾ ಭವನದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ವಹಿಸಿದ್ದರು. ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಉಜಿರೆ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅರ್ಚನಾ, ಪಿಡಿಓ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಜಯಂತ್ ಯು. ಬಿ. ಗ್ರಾಮಕರಣಿಕ ಪ್ರದೀಪ್, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಅರೋಗ್ಯ ಸಹಾಯಕರು, ಶಾಲೆಯ ಮುಖ್ಯೋಪಾಧ್ಯಯರು, ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು. ಸಭೆಯಲ್ಲಿ ವಾರ್ಡ್ ಮಟ್ಟದ ಕೋವಿಡ್ ಪ್ರಕರಣಗಳ ಕುರಿತು ಕೈ ಗೊಂಡ ಕ್ರಮಗಳ ಬಗ್ಗೆ, ವೈದ್ಯರ ನಡೆ ಹಳ್ಳಿ ಕಡೆಗೆ ಕ್ರಮದ ಕುರಿತು ಚರ್ಚಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post