ಕಲ್ಪ ಮೀಡಿಯಾ ಹೌಸ್ | ದಕ್ಷಿಣ ಕನ್ನಡ |
ಮಹತ್ವದ ಬೆಳವಣಿಗೆಯೊಂದರಲ್ಲಿ ರೌಡಿ ಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷಗಳ ಕಾಲ ಗಡಿ ಪಾರು ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಪೊಲೀಸ್ ಠಾಣೆಯಲ್ಲಿ ಸುಮಾರು 32ಕ್ಕೂ ಅಧಿಕ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಯನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶಿಸಲಾಗಿದೆ.ಪುತ್ತೂರು ಸಹಾಯಕ ಆಯುಕ್ತರಾದ (ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ರೌಡಿಶೀಟರ್ ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಮಾಡಿ ಆದೇಶ ಮಾಡಲಾಗಿದೆ.
ಗಡಿಪಾರು ಮಾಡಿದ ಆದೇಶ ಪ್ರತಿ ಬಂಟ್ವಾಳ ಉಪವಿಭಾಗ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post