ಕಲ್ಪ ಮೀಡಿಯಾ ಹೌಸ್ | ಉಜಿರೆ |
ನನ್ನ ಜೀವಕ್ಕೆ ಹಾನಿಯಾದರೆ ರಾಜ್ಯ ಸರ್ಕಾರ ಹಾಗೂ ಇಡೀ ಬಿಜೆಪಿ ನಾಯಕರು ಹೊಣೆ ಎಂದು ಮಹೇಶ್ ಶೆಟ್ಟಿ ತಿಮರೋಡಿ #Mahesh Shetty Timarodi ಹೇಳಿದ್ದಾರೆ.
ಬಿ. ಎಲ್ ಸಂತೋಷ್ #B L Santhosh ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಕರಣದ ತನಿಖೆಯನ್ನು ಎಸ್’ಐಟಿ ಮುಂದುವರೆಸಬೇಕು. ಬಿಜೆಪಿಯವರ ಪಾಪದ ಕೂಸು ಸರ್ವನಾಶ ಆಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಿಮರೋಡಿ ಪೊಲೀಸ್ ವಶಕ್ಕೆ
ಬಿ.ಎಲ್. ಸಂತೋಷ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಅಲ್ಲಿಂದ ತೆರಳಿದ್ದ ಪೊಲೀಸರು, ಸ್ಥಳೀಯ ಪೊಲೀಸರ ಸಹಕಾರದಲ್ಲಿ ತಿಮರೋಡಿಯನ್ನು ವಶಕ್ಕೆ ಪಡೆದಿದ್ದಾರೆ.

ತಿಮರೋಡಿ ವಿರುದ್ಧ ಎಫ್’ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯುಲು ಪೊಲೀಸರು ಆತನ ಉಜಿರೆಯ ಮನೆಗೆ ಬಂದ ವೇಳೆ ಹೈಡ್ರಾಮಾ ನಡೆಯಿತು.
ತಿಮರೋಡಿಯನ್ನು ವಶಕ್ಕೆ ಪಡೆಯಲು ಪೊಲೀಸರು ಆತನ ಮನೆಗೆ ಬಂದು ವಿಚಾರಿಸಿದಾಗ ಮನೆಯ ಒಳಗಿದ್ದೇ ಇಲ್ಲದಂತೆ ತಿಮರೋಡಿ ಬೆಂಬಲಿಗರು ಬಿಂಬಿಸಿದ್ದಾರೆ ಎಂದು ವರದಿಯಾಗಿದೆ.
ತಿಮರೋಡಿ ಬೆಂಬಲಿಗರು, ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ನೀವು ವಿಚಾರಣೆಗೆ ಕಡೆಯಿರಿ, ನಾವೇ ಬರುತ್ತೇವೆ. ಆದರೆ, ಈ ರೀತಿ ವಶಕ್ಕೆ ಪಡೆಯವುದು ಸರಿಯಲ್ಲ ಎಂದು ವಿರೋಧಿಸಿದ್ದಾರೆ.

ಇನ್ನು, ಪೊಲೀಸ್ ಕಾರು ಹತ್ತದ ತಿಮರೋಡಿ ಸ್ವಂತ ಕಾರಿನಲ್ಲೇ ಗಿರೀಶ್ ಮಟ್ಟಣ್ಣನವರ್ ಜೊತೆಯಲ್ಲಿ ಪೊಲೀಸರೊಂದಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.
ತಿಮರೋಡಿಯನ್ನು ವಶಕ್ಕೆ ಪಡೆದ ಪೊಲೀಸರು, ಬೆಳ್ತಂಗಡಿ ಠಾಣೆಗೆ ಕರೆದುಕೊಂಡು ಹೋಗುತ್ತಿದ್ದಾರೆ ಎನ್ನಲಾಗಿದೆ. ಸ್ಥಳೀಯ ಠಾಣೆಯಲ್ಲಿ ಕಾನೂನು ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ, ಆನಂತರ ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಹೋಗುತ್ತಾರೆ ಎಂದು ಹೇಳಲಾಗಿದೆ.
ಬಿ.ಎಲ್. ಸಂತೋಷ್ ವೈಯಕ್ತಿಕ ವಿಚಾರಗಳ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ತಿಮರೋಡಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಉಡುಪಿ ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದರನ್ವಯ ಎಫ್’ಐಆರ್ ದಾಖಲಾಗಿದ್ದು, ಇಂದು ಉಜಿರೆ ನಿವಾಸಕ್ಕೆ ಪಡೆದಿದ್ದಾರೆ.
ತಿಮರೋಡಿಯನ್ನು ವಶಕ್ಕೆ ಪಡೆಯುವ ಮುನ್ನ ಹೆಚ್ಚಿನ ಜಾಗ್ರತೆ ವಹಿಸಿರುವ ಪೊಲೀಸರು, 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ತೆರಳಿತ್ತು. ತಿಮರೋಡಿ ನಿವಾಸಕ್ಕೆ ತೆರಳಿದ ವೇಳೆ ಬೆಂಬಲಿಗರ ಕಡೆಯಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಬಿ.ಎಲ್. ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು.
ಈ ಕುರಿತು ವ್ಯಕ್ತಿಯೊಬ್ಬರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ ಬಿಎನ್’ಎಸ್ 196 (1), 352, 353 (2) ಸೆಕ್ಷನ್’ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post