ಕಲ್ಪ ಮೀಡಿಯಾ ಹೌಸ್ | ಉಂಬ್ಳೆಬೈಲು (ಭದ್ರಾವತಿ) |
ಗೃಹಸಚಿವ ಆರಗ ಜ್ಞಾನೇಂದ್ರ ಅವರ ಎಸ್ಕಾರ್ಟ್ ವಾಹನ ಹಾಗೂ ಖಾಸಗಿ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತವೊಂದು ತಪ್ಪಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ತುಮಕೂರಿನಿಂದ ಉಂಬ್ಳೆಬೈಲು ಮಾರ್ಗವಾಗಿ ತೀರ್ಥಹಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಗೃಹ ಸಚಿವರ ಕಾರಿನ ಮುಂಭಾಗ ಚಲಿಸುತ್ತಿದ್ದ ಭದ್ರತಾ ಸಿಬ್ಬಂದಿಯ ಜೀಪ್ ಹಾಗೂ ಖಾಸಗಿ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಢಿಕ್ಕಿ ಹೊಡೆದ ರಭಸಕ್ಕೆ ಎರಡೂ ವಾಹನಗಳು ಬಹಳಷ್ಟು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.











Discussion about this post