ಕಲ್ಪ ಮೀಡಿಯಾ ಹೌಸ್ | ಧಾರವಾಡ |
ನಿಪ್ಪಾಣಿಯಿಂದ ಭದ್ರಾವತಿಗೆ #Bhadravathi ತೆರಳುತ್ತಿದ್ದ ಕೆಎಸ್’ಆರ್’ಟಿಸಿ ಬಸ್’ನಲ್ಲಿ #KSRTCBus ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಸುಮಾರು 4.97 ಲಕ್ಷ ರೂ. ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಿನ್ನೆ ತಡರಾತ್ರಿ ತೇಗೂರು ಚೆಕ್ ಪೋಸ್ಟ್’ನಲ್ಲಿ #CheckPost ಕೆಎಸ್’ಆರ್’ಟಿಸಿ ಬಸ್ ನಿಲ್ಲಿಸಿ ತಪಾಸಣೆ ನಡೆಸಲಾಗಿದ್ದು, ಈ ವೇಳೆ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ರೂ.4,97,600 ಗಳ ನಗದು ಹಣ ಪತ್ತೆ ಆಗಿದ್ದು, ಹಣ ವಶಕ್ಕೆ ಪಡೆದು ಸೂಕ್ತ ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾ ಎಂಸಿಸಿ ನೋಡಲ್ ಅಧಿಕಾರಿ ಮೋನಾ ರಾವುತ ಮಾರ್ಗದರ್ಶನದಲ್ಲಿ ಎಸಿ ಶಾಲಂ ಹುಸೇನ್, ತಹಸಿಲ್ದಾರ ಡಾ.ಡಿ.ಎಚ್. ಹೂಗಾರ, ಎಂಸಿಸಿ ಅಧಿಕಾರಿ ಶಿವಪುತ್ರಪ್ಪ ಹೊಸಮನಿ, ಮ್ಯಾಜಿಸ್ಟ್ರೇಟ್’ಗಳಾದ ಪ್ರವೀಣ ಶಿಂಧೆ, ಮಂಜುನಾಥ ಹಿರೇಮಠ ಕ್ರಮವಹಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.









Discussion about this post