No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

NEET Controversy: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

kalpa News by kalpa News
July 25, 2026
in ರಾಷ್ಟ್ರೀಯ
0
Union Education Minister Dharmendra Pradhan Resigns
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ನವದೆಹಲಿ |

ನೀಟ್-ಯುಜಿ 2026 ಪರೀಕ್ಷೆ (NEET Exam) ವಿವಾದದ ನಡುವೆಯೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿ ಹಾಗೂ ದೇಶದ ಯುವಜನರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

pic.twitter.com/VSArqS98OJ

— Dharmendra Pradhan (@dpradhanbjp) July 25, 2026


ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಿಸಿದ ಎರಡು ಪುಟಗಳ ಬಹಿರಂಗ ಪತ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಅವರು, ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಆರಂಭದಿಂದಲೇ ತಾವು ಹೊತ್ತಿದ್ದು, ಯಾವುದೇ ಹಂತದಲ್ಲೂ ಜವಾಬ್ದಾರಿಯಿಂದ ಹಿಂದೆ ಸರಿದಿಲ್ಲ ಎಂದು ಹೇಳಿದ್ದಾರೆ.
Shivamogga City Corporationಮೇ 3, 2026ರಂದು ನಡೆದ ನೀಟ್-ಯುಜಿ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದ ಬಳಿಕ ಕೇಂದ್ರ ಸರ್ಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಬಳಿಕ ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸಲಾಗಿದ್ದು, ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT) ಮಾದರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Also read>> ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಲು ವಿದ್ಯಾರ್ಥಿ ಘಟಕಗಳು ಅತ್ಯುತ್ತಮ ವೇದಿಕೆ: ಎಸ್.ಎನ್. ನಾಗರಾಜ

20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಾವುದೇ ಅಡಚಣೆಯಿಲ್ಲದೆ ಪರೀಕ್ಷೆ ಬರೆಯಲು ಸರ್ಕಾರ ಆದ್ಯತೆ ನೀಡಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಜಿಲ್ಲಾ ಆಡಳಿತ, ವಿದ್ಯಾರ್ಥಿಗಳು ಮತ್ತು ಪೋಷಕರ ಸಹಕಾರದಿಂದ ಜೂನ್ 21ರಂದು ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಪ್ರಧಾನ್ ತಿಳಿಸಿದ್ದಾರೆ.

ಜುಲೈ 16ರಂದು ಪ್ರಕಟವಾದ ಫಲಿತಾಂಶದಲ್ಲಿ ಬಡ ಹಿನ್ನೆಲೆಯ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿರುವುದನ್ನು ಉಲ್ಲೇಖಿಸಿದ ಅವರು, ಈ ಅವಧಿಯಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಕೆಲವರು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದ್ದು, ಅದು ತಮ್ಮ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ಹೇಳಿದ್ದಾರೆ.
ಕಳೆದ 10 ದಿನಗಳ ಬೆಳವಣಿಗೆಗಳು ತಮ್ಮನ್ನು ಅತ್ಯಂತ ದುಃಖಿತಗೊಳಿಸಿವೆ. ಇದು ತಮ್ಮ ವೈಯಕ್ತಿಕ ಪ್ರತಿಷ್ಠೆಯ ಪ್ರಶ್ನೆಯಲ್ಲ, ಭಾರತದ ಯುವಶಕ್ತಿಯ ಭವಿಷ್ಯದ ಪ್ರಶ್ನೆಯಾಗಿದೆ ಎಂದು ಅವರು ತಿಳಿಸಿದ್ದಾರೆ.

ದೇಶದ ವಿವಿಧ ಭಾಗಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿರುವ ಅವರು, ಯುವಜನತೆ ಶಿಕ್ಷಣ ಮತ್ತು ವೃತ್ತಿಜೀವನದತ್ತ ಗಮನಹರಿಸಬೇಕು. ದೇಶವಿರೋಧಿ ಶಕ್ತಿಗಳು ಈ ಪರಿಸ್ಥಿತಿಯನ್ನು ದುರುಪಯೋಗಪಡಿಸಿಕೊಳ್ಳದಂತೆ ಎಚ್ಚರಿಕೆ ವಹಿಸಬೇಕಿದೆ. ದೇಶದ ಏಕತೆ ಕಾಪಾಡಲ್ಪಡಬೇಕು ಹಾಗೂ ಯಾವುದೇ ವಿದ್ಯಾರ್ಥಿಯ ಭವಿಷ್ಯ ಕಾನೂನು ಹೋರಾಟಗಳಲ್ಲಿ ಸಿಲುಕಬಾರದು ಎಂಬ ಉದ್ದೇಶದಿಂದಲೇ ತಮ್ಮ ರಾಜೀನಾಮೆಯನ್ನು ಪ್ರಧಾನಿ ಅವರಿಗೆ ಸಲ್ಲಿಸಿರುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.
JNNCE Shivamoggaಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನ, ವಿಶ್ವಾಸ ಹಾಗೂ ನಿರಂತರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿರುವ ಧರ್ಮೇಂದ್ರ ಪ್ರಧಾನ್, ಸಚಿವ ಸಂಪುಟದ ಸಹೋದ್ಯೋಗಿಗಳು, ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಹಕಾರವನ್ನೂ ಸ್ಮರಿಸಿದ್ದಾರೆ. ರಾಷ್ಟ್ರಸೇವೆಯೇ ತಮ್ಮ ಜೀವನದ ಪ್ರಮುಖ ಧ್ಯೇಯವಾಗಿದ್ದು, ಮುಂದೆಯೂ ದೇಶದ ಯುವಜನರ ಆಶಯಗಳನ್ನು ಈಡೇರಿಸಲು ಸೇವೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಆದರೆ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಪ್ರಧಾನಿ ಅಥವಾ ರಾಷ್ಟ್ರಪತಿಗಳು ಅಂಗೀಕರಿಸಿರುವ ಕುರಿತು ಇದುವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalpa News Advertising DisclaimerKalahamsa Infotech private limited

Tags: Dharmendra PradanKannada NewsKannada News LiveKannada News OnlineKannada News WebsiteKannada WebsiteLatest News KannadaNEET ControversyNew DelhiNews in KannadaNews KannadaPM Narendra Modiನವದೆಹಲಿ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಮಾಜಿಕ ಜವಾಬ್ದಾರಿ ಬೆಳೆಸಿಕೊಳ್ಳಲು ವಿದ್ಯಾರ್ಥಿ ಘಟಕಗಳು ಅತ್ಯುತ್ತಮ ವೇದಿಕೆ: ಎಸ್.ಎನ್. ನಾಗರಾಜ

Next Post

ಸಂಗೀತ ಶಿಕ್ಷಕಿ ಸೌಮ್ಯಾ ನಂದನ್’ರಿಗೆ ಗೌರವ ಡಾಕ್ಟರೇಟ್ ಪ್ರದಾನ

kalpa News

kalpa News

Next Post
Honorary Doctorate Conferred to Sowmya Nandan

ಸಂಗೀತ ಶಿಕ್ಷಕಿ ಸೌಮ್ಯಾ ನಂದನ್'ರಿಗೆ ಗೌರವ ಡಾಕ್ಟರೇಟ್ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL