ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿನ ಬುಳ್ಳಾಪುರದಲ್ಲಿ ರ್ಯಾಪಿಡ್ ಆಕ್ಷನ್ ಫೋರ್ಸ್ (ಆರ್’ಎಎಫ್)ಯ ಘಟಕದ ಶಂಕುಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಕರ್ನಾಟಕ, ಗೋವಾ, ಕೇರಳ ಮತ್ತು ಲಕ್ಷ ದ್ವೀಪ ಸೇರಿದಂತೆ ನಾಲ್ಕು ರಾಜ್ಯಗಳ 38 ಜಿಲ್ಲೆಗಳ ಕಾರ್ಯವ್ಯಾಪ್ತಿಗೆ ಒಳಪಡಲಿರುವ ರ್ಯಾಪಿಡ್ ಆಕ್ಷನ್ ಫೋರ್ಸ್ ಕೇಂದ್ರ ತಾಲೂಕಿನ ಬುಳ್ಳಾಪುರದಲ್ಲಿ ಮಂಜೂರಾಗಿದೆ. ಇದಕ್ಕಾಗಿ 50 ಎಕರೆ ಭೂಮಿಯೂ ಸಹ ಮಂಜೂರಾಗಿದ್ದು, ಶೀಘ್ರದಲ್ಲೇ ಇದಕ್ಕೆ ಶಂಕುಸ್ಥಾಪನೆ ನೆರವೇರಲಿದೆ.
ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ ಎಂಬ ಸುದ್ದಿ ಜಿಲ್ಲೆಯಲ್ಲಿ ಹರಿದಾಡುತ್ತಿದೆ. ಆದರೆ, ಅಧಿಕೃತವಾಗಿ ಯಾವುದೇ ರೀತಿಯ ಮಾಹಿತಿಗಳು ತಿಳಿದುಬಂದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post