ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ #VISL ಪುನಶ್ಚೇತನಕ್ಕೆ ಕನಿಷ್ಠ 5000 ಕೋಟಿ ರೂ.ಗಳನ್ನು ಹೂಡಿಕೆ ಮಾಡಲಾಗುವುದು ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ #HDKumaraswamy ಪುನರುಚ್ಚರಿಸಿದ್ದಾರೆ.
ಆದಿಚುಂಚನಗಿರಿಯಲ್ಲಿ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ.ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ವಿಐಎಸ್’ಎಲ್ ಕಾರ್ಖಾನೆ ಪುನಶ್ಚೇತನಕ್ಕೆ ನಾನು ಕೆಲಸ ಮಾಡುತ್ತಿದ್ದು, ಆರಂಭಿಕ ಹಂತದಲ್ಲಿ ಕನಿಷ್ಠ 5,000 ಕೋಟಿ ರೂ. ಆದರೂ ಈ ಕಾರ್ಖಾನೆಗೆ ಹೂಡಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಉಕ್ಕು ಕ್ಷೇತ್ರದಲ್ಲಿ ಸ್ವಾವಲಂಭನೆ ಸಾಧಿಸುವ ನಿಟ್ಟಿನಲ್ಲಿ ದೃಢವಾಗಿ ದುಡಿಮೆ ಮಾಡುತ್ತಿದ್ದೇನೆ. ಕಾರ್ಖಾನೆ ಪುನಶ್ಚೇತನಕ್ಕೆ ಸಂಬಂಧಿಸಿ ಅನೇಕ ರೀತಿಯ ತಾಂತ್ರಿಕ ಚರ್ಚೆಗಳು ಹಾಗೂ ಡಿಪಿಆರ್ ಕೆಲಸ ನಡೆಯುತ್ತಿದೆ ಎಂದರು.
ಮಂಡ್ಯ #Mandya ಜಿಲ್ಲೆಯು ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದ್ದು, ಒಂದು ಸಾವಿರ ಕೋಟಿ ವೆಚ್ಚದಲ್ಲಿ ಕನಿಷ್ಠ ಎರಡು ಕೈಗಾರಿಕೆಗಳನ್ನು ತರಲು ತೀರ್ಮಾನಿಸಿದ್ದೇನೆ. ಶ್ರೀ ಕಾಲಭೈರವನ ಈ ಸನ್ನಿಧಿಯಲ್ಲಿ ನಿಂತು ಧೈರ್ಯದಿಂದ ಹೇಳುತ್ತಿದ್ದೇನೆ. ಹೇಳಿದ ಕೆಲಸವನ್ನು ತಪ್ಪದೇ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಇದೇ ವೇಳೆ ರಾಜ್ಯದಲ್ಲಿ ಎಚ್’ಎಂಟಿ #HMT ಕಾರ್ಖಾನೆಯನ್ನೂ ಸಹ ಪುನಶ್ಚೇತನಗೊಳಿಸುವುದು ನನ್ನ ಆಸೆಯಾಗಿದ್ದು, ಈ ಕುರಿತಾಗಿಯೂ ಸಹ ಪ್ರಯತ್ನಗಳನ್ನು ನಡೆಸುತ್ತಿದ್ದೇನೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















