ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ನಿಯಮಾವಳಿಗಳನ್ನು ಇನ್ನಷ್ಟು ಸಡಿಲಗೊಳಿಸಿರುವ ಕೇಂದ್ರ ಸರ್ಕಾರ ಅನ್ ಲಾಕ್ 3 ಮಾರ್ಗಸೂಚಿಯನ್ನು ಪ್ರಕಟಿಸಿದೆ.
ದೇಶದಾದ್ಯಂತ ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಆಗಸ್ಟ್ 1ರಿಂದ ಜಾರಿಗೆ ಬರುವಂತೆ ನೈಟ್ ಕರ್ಫ್ಯೂ’ವನ್ನು ರದ್ದುಗೊಳಿಸಲಾಗಿದೆ.
ಕೇಂದ್ರ ಗೃಹ ಇಲಾಖೆ #unlock3guidelines ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಆದೇಶ ಪ್ರತಿ ಇಂತಿದೆ. pic.twitter.com/u9RFtDLaax
— Kalpa News (@KalpaNews) July 29, 2020
ಇನ್ನು, ಆಗಸ್ಟ್ 31ರವರೆಗೂ ದೇಶದಲ್ಲಿ ಶಾಲಾ ಕಾಲೇಜುಗಳನ್ನು ತೆರೆಯುವಂತಿಲ್ಲ ಎಂದು ಸೂಚಿಸಲಾಗಿದೆ.
ಯೋಗ ತರಬೇತಿ ಕೇಂದ್ರಗಳನ್ನು ಹಾಗೂ ಜಿಮ್ ಗಳನ್ನು ಆಗಸ್ಟ್ ತಿಂಗಳಿನಿಂದ ತೆರೆಯಲು ಅನುಮತಿ ನೀಡಲಾಗಿದೆ. ಇವುಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯವು ಸದ್ಯದಲ್ಲೇ ಸ್ಟ್ಯಾಂಡರ್ಡ್ ಅಪರೇಷನ್ ಪ್ರೊಸೀಜರ್ ಪ್ರಕಟಿಸಲಿದೆ.
ಇನ್ನು, ಈ ಬಾರಿಯ ಸ್ವತಂತ್ರ್ಯ ದಿನಾಚರಣೆಯನ್ನು ಆರೋಗ್ಯ ನಿಯಮವಾವಳಿಗಳನ್ನು ಪಾಲಿಸಿಕೊಂಡೇ ಆಚರಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post