ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಅನರ್ಹ ಶಾಸಕರು ನಾಳೆ ಗುರುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಮಾಡಿ ಅನರ್ಹ ಶಾಸಕರು ಮಾತುಕತೆ ನಡೆಸಿದ್ದು, ನಾಳೆ ಅವರೆಲ್ಲರೂ ಬಿಜೆಪಿ ಕಚೇರಿಗೆ ಆಗಮಿಸಿ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ ಎಂದರು.
ಅಲ್ಲದೇ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೊತೆ ಅನರ್ಹರ ಪಕ್ಷ ಸೇರ್ಪಡೆ ಕುರಿತು ಮಾತುಕತೆ ನಡೆಸಿದ್ದು, ಬೆಳಗ್ಗೆ 10 ಗಂಟೆಗೆ ಅನರ್ಹರನ್ನು ಕಟೀಲ್ ಬಿಜೆಪಿ ಸದಸ್ಯತ್ವ ನೀಡಿ ಪಕ್ಷಕ್ಕೆ ಸ್ವಾಗತಿಸಲಿದ್ದಾರೆ ಎಂದರು.
Get In Touch With Us info@kalpa.news Whatsapp: 9481252093
Discussion about this post