ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ #CorporationElection ರಾಷ್ಟ್ರ ಭಕ್ತರ ಬಳಗದಿಂದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಎಲ್ಲ ವಾರ್ಡ್’ಗಳಲ್ಲಿಯೂ ಸಹ ರಾಷ್ಟ್ರ ಭಕ್ತರ ಬಳಗದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ. ಮಹಿಳೆ ಸೇರಿದಂತೆ ಯಾವುದೇ ಮೀಸಲು ಘೋಷಣೆಯಾದರೂ ಆಯಾ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸುತ್ತೇವೆ ಎಂದರು.
ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ #ElectionCommission ಹಾಗೂ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ವಿಳಂಬ ಮಾಡದೆ ರಾಜ್ಯ ಸರ್ಕಾರ ಪಾಲಿಕೆ ಚುನಾವಣೆ ನಡೆಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರ ಭಕ್ತರ ಬಳಗದಲ್ಲಿ ಗುರುತಿಸಿಕೊಂಡಿದ್ದ ಎಸ್.ಎನ್. ಮಹಾಲಿಂಗ ಶಾಸ್ತ್ರಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ಮೂಲಕ ಸಹಕಾರಿ ವಲಯದಲ್ಲಿ ರಾಷ್ಟ್ರ ಭಕ್ತರ ಬಳಗಕ್ಕೆ ಗುರುತರ ಸ್ಥಾನ ದೊರಕಿಸುವಲ್ಲಿ ಯಶಸ್ವಿಯಾಗಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post