ಕಲ್ಪ ಮೀಡಿಯಾ ಹೌಸ್ | ಉಪ್ಪಿನಂಗಡಿ |
ಮನೆಯೊಂದಕ್ಕೆ ನುಗ್ಗಿ ಬಾಲಕಿಯೋರ್ವಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.
ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಂಧಿತರನ್ನು ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಎಂದು ಗುರುತಿಸಲಾಗಿದೆ.
ಕರಾಯ ಗ್ರಾಮದಲ್ಲಿ ಮರ ತುಂಡರಿಸುವ ಕೆಲಸ ಮಾಡುತ್ತಿದ್ದ ಇಬ್ಬರೂ ಆರೋಪಿಗಳು, ನೀರು ಕೇಳುವ ನೆಪದಲ್ಲಿ ಸಂತ್ರಸ್ತ ಬಾಲಕಿಯ ಮನೆಗೆ ಹೋಗಿ ನೀರು ಕೇಳುವ ನೆಪದಲ್ಲಿ ಅವರ ಕುಟುಂಬದ ವಿಚಾರಗಳನ್ನು ತಿಳಿದುಕೊಂಡಿದ್ದಾರೆ. ಮೂರು ದಿನಗಳ ಹಿಂದೆ ಸಂಜೆ ವೇಳೆಗೆ ಸಂತ್ರಸ್ತೆಯ ಮನೆಗೆ ಬಂದು ಮರ ತುಂಡರಿಸುವ ಚೈನ್ ಇಲ್ಲಿ ಬಾಕಿಯಾಗಿದೆ ಎಂದು ಹೇಳಿ ಬಾಲಕಿಯ ಕೈಗೆ ಚೀಟಿಯೊಂದನ್ನು ನೀಡಿದ್ದಾನೆ. ಈ ನಂಬರ್’ಗೆ ಫೋನ್ ಮಾಡು, ಇಲ್ಲದಿದ್ದರೆ ನಿನ್ನನ್ನು ಬಿಡುವುದಿಲ್ಲ ಎಂಬುವುದಾಗಿ ಜೀವ ಬೆದರಿಕೆಯೊಡ್ಡಿ ಹೋಗಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ.
ಇನ್ನು ಮರು ದಿನ ರಾತ್ರಿ 8 ಗಂಟೆಯ ಸುಮಾರಿಗೆ ಹಸೈನಾರ್ ತನ್ನ ಸಹಚರ ಅಬ್ಬಾಸ್ ಎಂಬಾತನೊಂದಿಗೆ ಮನೆಯ ಒಳಗೆ ಅಕ್ರಮವಾಗಿ ಪ್ರವೇಶ ಮಾಡಿ, ಬಾಲಕಿಯನ್ನು ಅತ್ಯಾಚಾರಕ್ಕೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ.
Also read: ಬೈಕ್’ಗೆ ಹಿಂಬದಿಯಿಂದ ಕಾರು ಡಿಕ್ಕಿ: ಬಂಟ್ವಾಳ ನಿವಾಸಿ ದುರ್ಮರಣ
ಬಾಲಕಿ ಹಾಗೂ ಬಾಲಕಿಯ ತಾಯಿ ರಕ್ಷಣೆಗಾಗಿ ಕೂಗಿಕೊಂಡಾಗ ನೆರೆ ಮನೆಯವರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಬಳಿಕ ಸ್ಥಳೀಯರ ಸಹಕಾರದಿಂದ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post