ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ |
ಮೂತ್ರ ವಿಸರ್ಜನೆಗೆ ತೆರಳಿದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ಸರ್ವಿಸ್ ತಂತಿ ತಗುಲಿ ವಿದ್ಯಾರ್ಥಿನಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು 2ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಬಸವರಾಜ ಗೌಳಿ(8) ಎಂದು ಗುರುತಿಸಲಾಗಿದ್ದು, ಮುಂಡವಾಡದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ದುರ್ಘಟನೆ ನಡೆದಿದೆ.
Also read: ಹೊಸ ವರ್ಷಕ್ಕೆ ಸಚಿವಾಲಯ ನೌಕರರಿಗಾಗಿ ಇವಿ ವಾಹನ ಮೇಳ: ಮಹಾಂತೇಶ ಬೀಳಗಿ
ವರದಿಗಳಂತೆ, ಶಾಲೆಯ ಶೌಚಾಲಯದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಸಾನ್ವಿ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ.
ಶಾಲಾ ಆವರಣದಲ್ಲಿ ಹೊಸದಾಗಿ ತೋಡಿದ ಬೋರ್ವೆಲ್ ಮೂಲಕ ನೀರನ್ನು ಪಂಪ್ ಮಾಡಲು ತಂತಿಯನ್ನು ಬೋರ್’ವೆಲ್’ಗೆ ಜೋಡಿಸಲಾಗಿತ್ತು. ಪ್ರತ್ಯೇಕವಾಗಿ ಹೆಸ್ಕಾಂನ ವಿತರಣಾ ಮಾರ್ಗದ ಸೇವಾ ಲೈನ್’ಗೆ ಸಂಪರ್ಕ ಕಲ್ಪಿಸಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.
ಮಕ್ಕಳು ಬಳಸುತ್ತಿದ್ದ ಶೌಚಾಲಯದೊಳಗೆ ತಂತಿ ತುಂಡಾಗಿ ಬಿದ್ದಿತ್ತು. ಶೌಚಾಲಯಕ್ಕೆ ಬಂದಿದ್ದ ಸಾನ್ವಿ ವಿದ್ಯುತ್ ತಂತಿ ಸ್ಪರ್ಶಿಸಿ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾಳೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post