ಕಲ್ಪ ಮೀಡಿಯಾ ಹೌಸ್ | ಉತ್ತರಪ್ರದೇಶ |
ರಾಜ್ಯದ ಸುಪ್ರಸಿದ್ದ ತೀರ್ಥಕ್ಷೇತ್ರ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ MLA B M Sukumar Shetty ಅವರು ಆಹ್ವಾನ ನೀಡಿದ್ದಾರೆ.
ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಕಚೇರಿಗೆ ಭೇಟಿ ನೀಡಿದ ಸುಕುಮಾರ ಶೆಟ್ಟಿ ಅವರು, ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಪ್ರಸಕ್ತ ವಿಚಾರಗಳ ಕುರಿತಾಗಿ ಚರ್ಚೆ ನಡೆಸಿದರು. ಅಲ್ಲದೇ, ಕೊಲ್ಲೂರು ಮುಕಾಂಬಿಕಾ ಕ್ಷೇತ್ರಕ್ಕೆ ಮತ್ತು ಯಡಮೊಗೆಯ ಹಲವರಿ ಮಠಕ್ಕೆ ಭೇಟಿ ನೀಡುವಂತೆ ಅವರು ಆಹ್ವಾನ ನೀಡಿದರು.
ಈ ಕುರಿತಂತೆ ಮಾತನಾಡಿದ ಶಾಸಕ ಸುಕುಮಾರ ಶೆಟ್ಟಿ ಅವರು, 2018 ರ ಚುನಾವಣಾ ಸಂದರ್ಭದಲ್ಲಿ ನಮ್ಮ ಕ್ಷೇತ್ರಕ್ಕೆ ಆಗಮಿಸಿದ್ದ ಮಾನ್ಯ ಯೋಗಿಜಿಯವರನ್ನು ಮತ್ತೊಮ್ಮೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸುವ ಅವಕಾಶ ಇಂದು ಒದಗಿ ಬಂದಿತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Also read: ‘ಕೈ’ ರಾಷ್ಟ್ರೀಯ ನಾಯಕರಿಗೆ ಇಡಿ ನೋಟೀಸ್: ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ, ಮುಖಂಡರ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post