ಕಲ್ಪ ಮೀಡಿಯಾ ಹೌಸ್ | ಉತ್ತರ ಪ್ರದೇಶ |
ಗೂಗಲ್ ಮ್ಯಾಪ್ #Google Map ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆ ಮೇಲಿನಿಂದ ನದಿಗೆ ಬಿದ್ದು, ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ವಿವೇಕ್ ಮತ್ತು ಅಮಿತ್ ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು ತಿಳಿದುಬಂದಿಲ್ಲ ಎಂದು ವರದಿಯಾಗಿದೆ.
ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಮೂವರು ಬಾಡಿಗೆ ಕಾರಿನಲ್ಲಿ ಗುರುಗ್ರಾಮದಿಂದ ಉತ್ತರಪ್ರದೇಶದ ಬರೇಲಿಗೆ ಹೊರಟಿದ್ದರು. ಈ ವೇಳೆ ಮಾರ್ಗ ಸರಿಯಾಗಿ ಗೊತ್ತಿರದ ಕಾರಣ ಚಾಲಕ ಗೂಗಲ್ ಮ್ಯಾಪ್ ಮೊರೆ ಹೋಗಿದ್ದು ಅದರಂತೆ ಬರೇಲಿ ಸಮೀಪದ ನಿರ್ಮಾಣ ಹಂತದ ಸೇತುವೆಯ ದಾರಿ ತೋರಿಸಿದೆ ಅದರಂತೆ ಕಾರು ಚಾಲಕ ಅದೇ ಮಾರ್ಗವನ್ನು ಅನುಸರಿಸಿಕೊಂಡು ಹೋಗಿದ್ದಾನೆ.
Also read: 15 ವರ್ಷದ ಬಾಲಕಿ ಮೇಲೆ ಚಾಲಕನಿಂದ ಅತ್ಯಾಚಾರ
ಆದರೆ ಸೇತುವೆ ಅಪೂರ್ಣಗೊಂಡಿದ್ದರಿAದ ಚಾಲಕನ ನಿಯಂತ್ರಣ ತಪ್ಪಿದ ಕಾರು ಸುಮಾರು ಐವತ್ತು ಅಡಿ ಆಳದ ರಾಮಗಂಗಾ ನದಿಗೆ ಬಿದ್ದಿದೆ.
ದುರಂತ ಎಂದರೆ ಘಟನೆ ನಡೆದಾಗ ರಾತ್ರಿಯಾಗಿದ್ದ ಕಾರಣ ವಿಚಾರ ಯಾರಿಗೂ ಗೊತ್ತಾಗಿಲ್ಲ ಮರುದಿನ ಭಾನುವಾರ ಬೆಳಿಗ್ಗೆ ಅಲ್ಲಿನ ಸ್ಥಳೀಯರು ನದಿಗೆ ಬಿದ್ದಿರುವ ಕಾರೊಂದನ್ನು ಗಮನಿಸಿದಾಗ ವಿಚಾರ ಬೆಳಕಿಗೆ ಬಂದಿದೆ.
ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಈ ನಡುವೆ ಅಮಿತ್ ಹಾಗೂ ವಿವೇಕ್ ಕುಟುಂಬ ಸದಸ್ಯರು ಘಟನಾ ಸ್ಥಳಕ್ಕೆ ಧಾವಿಸಿ ಸೇತುವೆ ನಿರ್ಮಾಣ ಅಧಿಕಾರಿಯ ವಿರುದ್ಧ ಕಿಡಿಕಾರಿದ್ದಾರೆ. ಸೇತುವೆಗೆ ಬ್ಯಾರಿಕೇಡ್ ಇಡದೆ ಈ ದುರಂತ ಸಂಭವಿಸಿದೆ ಎಂದು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post