ಕಲ್ಪ ಮೀಡಿಯಾ ಹೌಸ್ | ಉತ್ತರ ಪ್ರದೇಶ |
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅಯೋಧ್ಯ ದೇವಸ್ಥಾನದ ಆವರಣದಲ್ಲಿ ಸನ್ಯಾಸಿಗಳೊಂದಿಗೆ ವಾಸ್ತವ್ಯ ಹೂಡುವಂತೆ ಹನುಮಾನ್ ಘರಿ ದೇವಸ್ಧಾನದ ದರ್ಶಕ ಮಹಂತ್ ಸಂಜಯ್ ದಾಸ್ ಆಹ್ವಾನಿಸಿದ್ದಾರೆ.
ಸಂಸದ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರವು ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನೀಡಿದ ಬೆನ್ನಲ್ಲೇ ಅವರಿಗೆ ಮನೆ ನೀಡಲು ಅನೇಕರು ಮುಂದಾಗಿದ್ದಾರೆ.
“ನಾವು ರಾಹುಲ್ ಗಾಂಧಿಯನ್ನು ಹನುಮಾನ್ಘರಿ ಮತ್ತು ಅಯೋಧ್ಯೆಗೆ ಆಹ್ವಾನಿಸುತ್ತೇವೆ. ಅವರು ಇಲ್ಲಿಗೆ ಬಂದರೆ ನಾವು ಅವರಿಗೆ ನಮ್ಮ ಸ್ಥಾನವನ್ನು ನೀಡುತ್ತೇವೆ” ಎಂದು ಮಹಂತ್ ಸಂಜಯ್ ದಾಸ್ ಅವರು ಹೇಳಿದ್ದಾರೆ.
2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲೇ ಲೋಕಸಭಾ ಸಚಿವಾಲಯವು ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದು ಮಾತ್ರವಲ್ಲದೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿತ್ತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















