ಕಲ್ಪ ಮೀಡಿಯಾ ಹೌಸ್ | ಉತ್ತರ ಕನ್ನಡ |
ಸ್ನಾನಕ್ಕಾಗಿ ನದಿಗಿಳಿದ ವ್ಯಕ್ತಿಯೋರ್ವನನ್ನು ಮೊಸಳೆಗಳು ಎಳೆದೊಯ್ದಿ ರುವ ಘಟನೆ ದಾಂಡೇಲಿಯ ಕುಳಗಿ ರಸ್ತೆಯ ಈಶ್ವರ ದೇವಸ್ಥಾನದ ಸಮೀಪ ನಡೆದಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವ್ಯಕ್ತಿ ನದಿ ದಡದ ಮೇಲೆ ಬಟ್ಟೆ ಹಾಗೂ ಚಪ್ಪಲಿ ತೆಗೆದಿಟ್ಟು ಸ್ನಾನಕ್ಕಾಗಿ ನದಿಗೆ ಇಳಿದಿದ್ದಾರೆ.ಈ ಭಾಗದಲ್ಲಿ ಮೊಸಳೆ ಹೆಚ್ಚಿರುವುದರಿಂದ ಸ್ಥಳೀಯರು ತಕ್ಷಣವೇ ಮೇಲೆ ಬರುವಂತೆ ಕೂಗಿ ಹೇಳಿದ್ದಾರೆ. ಆದರೆ ಆತ ನೀರಿಗಿಳಿದ ಕೆಲವೇ ಹೊತ್ತಲ್ಲೇ ಎರಡು ಮೊಸಳೆಗಳು ಆತನ ಮೇಲೆ ದಾಳಿ ನಡೆಸಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ದಾಂಡೇಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಆಗಮಿಸಿ, ವ್ಯಕ್ತಿಗಾಗಿ ಹುಡುಕಾಟ ನಡೆಸಿದ್ದಾರೆ.
Also read: ತಮ್ಮ ಒಬ್ಬನೇ ಮಗನನ್ನು ಹತ್ಯೆ ಮಾಡಿಸಿದ ಪೋಷಕರು! ಯಾಕೆ ಗೊತ್ತಾ? ಇಲ್ಲಿದೆ ನೋಡಿ












Discussion about this post