Read - < 1 minute
ಶಿವಮೊಗ್ಗ: ಸೆ.12ರ ಗುರುವಾರ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರ ವ್ಯಾಪ್ತಿ ಎಲ್ಲ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.
ಈ ಕುರಿತಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಎಲ್ಲ ಶಿಕ್ಷಣ ಸಂಯೋಜಕರಿಗೆ ಪತ್ರ ಬರೆದಿದ್ದು, ಶಾಲೆಗಳ ಮುಖ್ಯಶಿಕ್ಷಕರು ತಮ್ಮ ಆಡಳಿತ ಮಂಡಳಿ ಅಥವಾ ಎಸ್’ಡಿಎಂಸಿ ಸದಸ್ಯರೊಂದಿಗೆ ಚರ್ಚೆ ನಡೆಸಿ, ಮಕ್ಕಳ ಸುರಕ್ಷತೆ ದೃಷ್ಠಿಯಿಂದ ರಜೆ ನೀಡಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Discussion about this post