ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಸದಾ ಹಿಂದೂ ಧರ್ಮ ಹಾಗೂ ಹಿಂದೂ ದೇವರುಗಳನ್ನು ಅವಮಾನಿಸುವ ಮಾತುಗಳನ್ನಾಡುವ ವಿವಾದಾತ್ಮಕ ಸಾಹಿತಿ ಕೆ.ಎಸ್. ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದಾರೆ.
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್ ಇಂದು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಭಗವಾನ್.ಗೆ ಜಾಮೀನು ಮಂಜೂರು ಮಾಡಿತ್ತು.
ಬುದ್ಧಿಜೀವಿ, ಧರ್ಮ ವಿರೋಧಿ #ಫ್ರೊಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. #ಜೈಶ್ರೀರಾಮ್🚩🚩🚩 pic.twitter.com/t0iF36VR3x
— Meera Raghavendra (@MeeraRaghavendr) February 4, 2021
ವಿಚಾರಣೆ ಬಳಿಕ ಕೋರ್ಟ್ ನಿಂದ ಹೊರಬಂದ ಭಗವಾನ್ ಮುಖಕ್ಕೆ ಮೀರಾ ರಾಘವೇಂದ್ರ ಮಸಿ ಬಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post