ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಜ.2 ಹಾಗೂ 3ರಂದು ವೈಕುಂಠ ಏಕಾದಶಿ ಅದ್ದೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳು ಅಂತಿಮಗೊಂಡಿದೆ ಎಂದು ತಹಶೀಲ್ದಾರ್ ಆರ್. ಪ್ರದೀಪ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತಾಲೂಕು ಆಡಳಿತ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸಹಯೋಗದೊಂದಿಗೆ ಕೈಗೊಂಡಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.

ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
- ಜ.2: ಬೆಳಗ್ಗೆ 4.30ರಿಂದ: ಪ್ರಾಕಾರ ಉತ್ಸವ, ಪರಮಪದ ಮಹಾದ್ವಾರದ ಪೂಜೆ, ಶ್ರೀ ವೈಕುಂಠನಾಥನ ದರ್ಶನ, ಶ್ರೀಗೋದಾದೇವಿ ಅಮ್ಮನವರ ಉತ್ಸವ, ನಗರ ಸಂಕೀರ್ತನೆ
- ಜ.3: ಬೆಳಿಗ್ಗೆ 4.30ಕ್ಕೆ ನಿತ್ಯಪೂಜೆ, ಮಹಾಮಂಗಳಾರತಿ. ಸಂಜೆ 6ಕ್ಕೆ ಮುಕ್ಕೋಟಿ ದ್ವಾದಶಿ ಪ್ರಯುಕ್ತ ರಥಬೀದಿಯಲ್ಲಿ ಶ್ರೀಸ್ವಾಮಿಯವರ ಉತ್ಸವ ವೈಕುಂಠನಾಥನ ದರ್ಶನ
- ಸರದಿ ಸಾಲಿನಲ್ಲಿ ಭಕ್ತರು ದೇವರ ದರ್ಶನ ಪಡೆಯಬೇಕು
- ದರ್ಶನಕ್ಕೆ ಯಾವುದೇ ಪಾಸ್ ವ್ಯವಸ್ಥೆ ಇಲ್ಲ
- ಮುಜರಾಯಿ ಇಲಾಖೆ ವತಿಯಿಂದ 500 ರೂ. ಮೌಲ್ಯದ ರಸೀದಿ ಪಡೆದು ನೇರ ದರ್ಶನ ಪಡೆಯಬಹುದು.
- ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
- ಹಳದಮ್ಮ ದೇವಾಲಯ ಹಾಗೂ ಬಸವೇಶ್ವರ ವೃತ್ತದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ
- ದೇವಾಲಯದ ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ









Discussion about this post