ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಲ್ಲಿನ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ಜ.2 ಹಾಗೂ 3ರಂದು ವೈಕುಂಠ ಏಕಾದಶಿ ಅದ್ದೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ದತೆಗಳು ಅಂತಿಮಗೊಂಡಿದೆ ಎಂದು ತಹಶೀಲ್ದಾರ್ ಆರ್. ಪ್ರದೀಪ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ಬಾರಿ ಸಹ ವೈಕುಂಠ ಏಕಾದಶಿ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತಾಲೂಕು ಆಡಳಿತ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸಹಯೋಗದೊಂದಿಗೆ ಕೈಗೊಂಡಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ.ಜಿ. ಮಾರುತಿ, ಸಹಾಯಕ ಅರ್ಚಕ ಎಸ್. ಶ್ರೀನಿವಾಸ್, ಪೊಲೀಸ್ ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಆರ್. ರವಿ, ವಿಶ್ವೇಶ್ವರರಾವ್ ಗಾಯ್ಕವಾಡ್, ಕೆ. ಗಜೇಂದ್ರ, ಎಸ್. ಸತೀಶ, ಆಶಾ ಪುಟ್ಟಸ್ವಾಮಿ, ಕೆ. ಲತಾ ಮತ್ತು ಬಿ.ಎಚ್. ರೇಣುಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?
- ಜ.2: ಬೆಳಗ್ಗೆ 4.30ರಿಂದ: ಪ್ರಾಕಾರ ಉತ್ಸವ, ಪರಮಪದ ಮಹಾದ್ವಾರದ ಪೂಜೆ, ಶ್ರೀ ವೈಕುಂಠನಾಥನ ದರ್ಶನ, ಶ್ರೀಗೋದಾದೇವಿ ಅಮ್ಮನವರ ಉತ್ಸವ, ನಗರ ಸಂಕೀರ್ತನೆ
- ಜ.3: ಬೆಳಿಗ್ಗೆ 4.30ಕ್ಕೆ ನಿತ್ಯಪೂಜೆ, ಮಹಾಮಂಗಳಾರತಿ. ಸಂಜೆ 6ಕ್ಕೆ ಮುಕ್ಕೋಟಿ ದ್ವಾದಶಿ ಪ್ರಯುಕ್ತ ರಥಬೀದಿಯಲ್ಲಿ ಶ್ರೀಸ್ವಾಮಿಯವರ ಉತ್ಸವ ವೈಕುಂಠನಾಥನ ದರ್ಶನ
- ಸರದಿ ಸಾಲಿನಲ್ಲಿ ಭಕ್ತರು ದೇವರ ದರ್ಶನ ಪಡೆಯಬೇಕು
- ದರ್ಶನಕ್ಕೆ ಯಾವುದೇ ಪಾಸ್ ವ್ಯವಸ್ಥೆ ಇಲ್ಲ
- ಮುಜರಾಯಿ ಇಲಾಖೆ ವತಿಯಿಂದ 500 ರೂ. ಮೌಲ್ಯದ ರಸೀದಿ ಪಡೆದು ನೇರ ದರ್ಶನ ಪಡೆಯಬಹುದು.
- ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
- ಹಳದಮ್ಮ ದೇವಾಲಯ ಹಾಗೂ ಬಸವೇಶ್ವರ ವೃತ್ತದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ
- ದೇವಾಲಯದ ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post