ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಾರಣಾಸಿಯ #Varanasi ಜ್ಞಾನವಾಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ #Masjid ಆವರಣದಲ್ಲಿರುವ ಶಿವಲಿಂಗ ಆಕೃತಿ ಸ್ಥಳದ ಸಂಪೂರ್ಣ ಸ್ವಚ್ಛತೆಗೆ ಸುಪ್ರೀಂ ಕೋರ್ಟ್ #SupremeCourt ಆದೇಶ ನೀಡಿದೆ.
ಪ್ರಕರಣ ಕುರಿತಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಜೆ.ಬಿ. ಪರ್ದೀವಾಲಾ ಹಾಗೂ ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು, ಈ ಆದೇಶ ನೀಡಿದೆ.
ಪ್ರಮುಖವಾಗಿ ವಾರಣಾಸಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಮೇಲುಸ್ತುವಾರಿಯಲ್ಲಿ ನೀರಿನ ತೊಟ್ಟಿ ಅಥವಾ ವಜುಖಾನಾದ #Vazukhana ಸಂಪೂರ್ಣ ಸ್ವಚ್ಛತೆ ಆಗಬೇಕು ಎಂದು ಆದೇಶ ನೀಡಿದೆ.
ಈ ಕಟ್ಟಡದಲ್ಲಿ ಶಿವಲಿಂಗವಿದೆ ಎಂದು ಹಿಂದೂಗಳ ಪರ ವಕೀಲರು ವಾದಿಸಿದ್ದು, ಇದೇ ವಿಚಾರವಾಗಿ ಜ್ಞಾನವಾಪಿಯ ಮುಚ್ಚಿದ ಪ್ರದೇಶವನ್ನು ತೆರೆಯಬೇಕು, ತಕ್ಷಣ ಸ್ವಚ್ಛಗೊಳಿಸಬೇಕು ಎಂದು ಹಿಂದೂಗಳು ಮನವಿ ಸಲ್ಲಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post