ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಪ್ರತಿಷ್ಠಿತ ಶಿವಮೊಗ್ಗ ಹೆಲ್ತ್ ಕೇರ್ ಎಂಪ್ಲಾಯೀಸ್ ಅಸೋಸಿಯೇಶನ್ ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಸಹ ಡಾಕ್ಟರ್ಸ್ ಕಪ್ ಕ್ರಿಕೆಟ್ ಟೂರ್ನಿಮೆಂಟ್ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದೆ.
ಮಾರ್ಚ್ 15ರ ಭಾನುವಾರ ಶಿವಮೊಗ್ಗ ಜೆಎನ್’ಎನ್’ಸಿಇ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಾರ್ಚ್ 23ರ ಭಾನುವಾರ ಇದೇ ಪ್ರಥಮ ಬಾರಿಗೆ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗಳಿಗಾಗಿ ಕುವೆಂಪು ರಂಗಮಂದಿರದಲ್ಲಿ ನೃತ್ಯ-ಸಂಗೀತ ಸ್ಪರ್ಧೆ ನಡೆಯಲಿದೆ.
ಅಸೋಸೊಯೇಶನ್ ವತಿಯಿಂದ ಕಳೆದ ಐದು ವರ್ಷಗಳಿಂದ ವೈದ್ಯರಿಗಾಗಿ ಡಾಕ್ಟರ್ಸ್ ಕಪ್ ಕ್ರಿಕೆಟ್ ಟೂರ್ನಿಮೆಂಟ್’ನ್ನು ಯಶಸ್ವಿಯಾಗಿ ಆಯೋಜನೆ ಮಾಡಲಾಗುತ್ತಿದೆ.
ಈ ಬಾರಿಯ ಸ್ಪರ್ಧೆಗಳಿಗೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬಸ್ಥರು ಆಗಮಿಸಿ ಪ್ರೋತ್ಸಾಹ ನೀಡಬೇಕು ಎಂದು ಅಸೋಸಿಯೇಶನ್ ಕೋರಿದೆ.
Get in Touch With Us info@kalpa.news Whatsapp: 9481252093















