ಕಲ್ಪ ಮೀಡಿಯಾ ಹೌಸ್ | ವ್ಯಾಟಿಕನ್ ಸಿಟಿ |
ಕ್ರಿಶ್ಚಿಯನ್ ಜಾಗತಿಕ ಧರ್ಮಗುರು ಪೋಪ್ ಫ್ರಾನ್ಸಿಸ್ #Pope Francis ಇಂದು ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಸಿಟಿ ಮೂಲಗಳು ಖಚಿತಪಡಿಸಿವೆ. ಪೋಪ್ ಅವರ ನಿಧನದಿಂದ ಜಗತ್ತಿನೆಲ್ಲೆಡೆ ಇರುವ ಕ್ರೈಸ್ತ ಸಮುದಾಯದಲ್ಲಿ ಶೋಕ ಮಡುಗಟ್ಟಿದೆ.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ (88) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 7:35 ಕ್ಕೆ ಫ್ರಾನ್ಸಿಸ್ ಇಹಲೋಕ ತ್ಯಜಿಸಿದರು ಎಂದು ವ್ಯಾಟಿಕನ್ ಪ್ರಕಟಣೆ ತಿಳಿಸಿದೆ,
ನ್ಯುಮೋನಿಯಾದಿಂದ ಬಳಲುತ್ತಿದ್ದ ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.
ಪೋಪ್ ಫ್ರಾನ್ಸಿಸ್ ಅವರ ಇಡೀ ಜೀವನವು ಭಗವಂತನ ಮತ್ತು ಅವರ ಚರ್ಚ್ ಸೇವೆಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















