ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ದೇಶವಿರೋಧಿ ಚಟುವಟಿಕೆ ಆರೋಪದ ಹಿನ್ನೆಲೆಯಲ್ಲಿ ದೇಶದಾದ್ಯಂತ ಐದು ವರ್ಷಗಳ ಕಾಲ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್’ಐ) #PFI ಸಂಘಟನೆಯನ್ನು ಬ್ಯಾನ್ ಮಾಡಿ ಕೇಂದ್ರ ಸರ್ಕಾರ #GovtOfIndia ಆದೇಶಿಸಿದೆ.
ಕೇಂದ್ರ ಗೃಹ ಇಲಾಖೆ ಈ ಕುರಿತಂತೆ ಆದೇಶ ಹೊರಡಿಸಿದ್ದು, ಎನ್’ಐಎ ದಾಳಿಯ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ದೇಶದಾದ್ಯಂತ ಐದು ವರ್ಷಗಳ ಕಾಲ ನಿಷೇಧಿಸಲಾಗಿದ್ದು, ಇದು ಕಾನೂನು ಬಾಹಿರ ಸಂಘಟನೆ #unlawful_association ಎಂದು ಘೋಷಣೆ ಮಾಡಿದೆ.
ಕಾನೂನುಬಾಹಿರ ಚಟುವಟಿಕೆಗಳ (ನಿರ್ಬಂಧ) ಕಾಯ್ದೆಯ ಅಡಿ ಪಿಎಫ್‌ಐ ಅಂಗ ಸಂಸ್ಥೆಗಳಾದ ರಿಹಬ್ ಇಂಡಿಯಾ ಫೌಂಡೇಶನ್ RIF, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ CFI, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ AIIC, ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ NCHRO, ನ್ಯಾಷನಲ್ ವುಮೆನ್ಸ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ ಕೇರಳವನ್ನು ನಿಷೇಧಿಸಲಾಗಿದೆ.
ಸೆಪ್ಟೆಂಬರ್ 22 ಮತ್ತು ಸೆಪ್ಟೆಂಬರ್ 27 ರಂದು ರಾಷ್ಟ್ರೀಯ ತನಿಖಾ ಸಂಸ್ಥೆ NIA, ಜಾರಿ ನಿರ್ದೇಶನಾಲಯ ED ಮತ್ತು ರಾಜ್ಯ ಪೊಲೀಸರು PFI ಮೇಲೆ ದಾಳಿ ನಡೆಸಿತ್ತು. ಮೊದಲ ಸುತ್ತಿನ ದಾಳಿಯಲ್ಲಿ ಪಿಎಫ್‌ಐಗೆ ಸೇರಿದ 106 ಮಂದಿಯನ್ನು ಬಂಧಿಸಲಾಗಿದ್ದರೆ ಎರಡನೇ ಸುತ್ತಿನ ದಾಳಿ 247 ಮಂದಿಯನ್ನು ಬಂಧಿಸಿತ್ತು.
ಪ್ಯಾನ್ ಇಂಡಿಯಾ #PanIndiaRaid ಐತಿಹಾಸಿಕ ದಾಳಿ ನಡೆಸಿದ ಐದು ದಿನಗಳ ಅವಧಿಯಲ್ಲೇ ಈ ಸಂಘಟನೆ ಇಸ್ಲಾಮಿಕ್ ಉಗ್ರವಾದದ ಜೊತೆಯ ನಂಟು ಹೊಂದಿದೆ ಎಂಬ ಆರೋಪ ಮಾಡಲಾಗಿತ್ತು. ಅಲ್ಲದೇ, ಎನ್’ಐಎ ದಾಳಿಗೆ ಪ್ರತಿಕಾರವಾಗಿ ಕೇರಳ #Kerala ಹಾಗೂ ತಮಿಳುನಾಡಿನಲ್ಲಿ #TamilNadu ಪಿಎಫ್’ಐ ವ್ಯಾಪಕ ಹಿಂಸಾಚಾರ ನಡೆಸಿತ್ತು.
ಪಿಎಫ್’ಐ ಜೊತೆಯಲ್ಲಿ ಸಂಬಂಧ ಹೊಂದಿದ್ದರು ಎಂದು ಹೇಳಲಾದ 150 ಕ್ಕೂ ಹೆಚ್ಚು ಜನರನ್ನು ಮಂಗಳವಾರ ಏಳು ರಾಜ್ಯಗಳಾದ್ಯಂತ ದಾಳಿಯಲ್ಲಿ ಬಂಧಿಸಲಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post