ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಹೈದರಾಬಾದ್: ರಾಷ್ಟ್ರವನ್ನೇ ತಲ್ಲಣಗೊಳಿಸಿರುವ ತೆಲಂಗಾಣ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅವರ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆಗೆ ಸಂಬಂಧಿಸಿದಂತೆ ಕೊನೆಗೂ ಮೌನ ಮುರಿದಿರುವ ಅಲ್ಲಿನ ಸಿಎಂ ಕೆ. ಚಂದ್ರಶೇಖರ ರಾವ್, ಪ್ರಕರಣವನ್ನು ತ್ವರಿತ ವಿಚಾರಣೆ ನಡೆಸಬೇಕು ಎಂದು ಆದೇಶಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ವಿಶೇಷ ತುರ್ತು ಹಾಗೂ ವಿಚಾರಣಾ ಪೀಠವನ್ನು ರಚನೆ ಮಾಡಿ, ತ್ವರಿತಗತಿಯಲ್ಲಿ ವಿಚಾರಣೆಯನ್ನು ಮುಕ್ತಾಯ ಮಾಡುವಂತೆ ಆದೇಶ ನೀಡಲಾಗಿದೆ. ಸಂತ್ರಸ್ಥೆಯ ಕುಟುಂಬಕ್ಕೆ ಅಗತ್ಯವಿರುವ ಎಲ್ಲ ರೀತಿಯ ನೆರವು, ನೈತಿಕ ಬೆಂಬಲ ನೀಡಲು ತೆಲಂಗಾಣ ಸರ್ಕಾರ ಸಿದ್ದವಿದೆ. ನಿಮ್ಮ ಕುಟುಂಬದೊಂದಿದೆ ನಮ್ಮ ಸರ್ಕಾರವಿದೆ ಎಂದಿದ್ದಾರೆ.
ಪಶುವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಬೆಳಕಿಗೆ ಬಂದ ನಂತರ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಕರಣವನ್ನು ಭೀಕರ ಮತ್ತು ಅತ್ಯಂತ ನೀಚ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ಅತ್ಯಾಚಾರಿಗಳು ತಪ್ಪಿಸಿಕೊಳ್ಳದಂತೆ ಅವರಿಗೆ ಕಠಿಣ ಶಿಕ್ಷೆ ವಿಧಿಸುವ ಕಾರ್ಯ ಸರ್ಕಾರ ಮಾಡಲಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093







Discussion about this post