ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರವನ್ನು ರಾಜ್ಯ ಸಚಿವ ಸಂಪುಟ ಅನೌಪಚಾರಿಕ ಅನುಮೋದನೆ ನೀಡಿದ್ದು, ಮುಂದಿನ ಸಚಿವ ಸಂಪುಟದಲ್ಲಿ ಅಧಿಕೃತ ಅನುಮೋದನೆ ನೀಡಲಿದೆ.
ಈ ಕುರಿತಂತೆ ಮಾತನಾಡಿರುವ ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ, ವಿಜಯನಗರ ಜಿಲ್ಲೆ ಸ್ಥಾಪನೆಗೆ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕ ಒಪ್ಪಿಗೆ ನೀಡಲಾಗಿದ್ದು, ಮುಂದಿನ ಸಭೆಯಲ್ಲಿ ಅಧಿಕೃತ ಅನುಮೋದನೆ ಸಿಗಲಿದೆ. ಜಿಲ್ಲೆಯ ರಚನೆ ಸಂಬಂಧ ಪ್ರಕ್ರಿಯೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುತ್ತದೆ ಎಂದಿದ್ದಾರೆ.
ಇನ್ನು, ಡಿಸೆಂಬರ್ 7ರಿಂದ 15ರವರೆಗೆ ವಿಧಾನಸಭೆಯ ಚಳಿಗಾಲದ ಅಧಿವೇಶನ ಬೆಂಗಳೂರಲ್ಲಿ ನಡೆಯಲಿದೆ.
ಮರಾಠ ಅಭಿವೃದ್ಧಿ ಪ್ರಾಧಿಕಾರದ ಹೆಸರು ಬದಲಾವಣೆಗೆ ನಿರ್ಧರಿಸಿದ್ದು, ಇನ್ನು ಮುಂದೆ ’ಮರಾಠ ಸಮುದಾಯ ನಿಗಮ’ ಎಂದು ಬದಲಾವಣೆಯಾಗಲಿದೆ ಎಂದರು.
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಸಂಬಂಧ ಸಚಿವ ಸಂಪುಟ ಉಪ ಸಮಿತಿ ರಚನೆ ಮಾಡಲಾಗುತ್ತದೆ. ಒಂದು ವಾರದಲ್ಲಿ ಸಮಿತಿ ರಚನೆ ಮಾಡಲಾಗುತ್ತದೆ. ಸಮಿತಿ ವರದಿ ಆಧರಿಸಿ ಮೀಸಲು ಹೆಚ್ಚಳ ಮಾಡಲಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post