ಕಲ್ಪ ಮೀಡಿಯಾ ಹೌಸ್ | ವಿಜಯನಗರ |
ಮದುವೆ ಆಗಲು ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೂಡ್ಲಿಗೆ ತಾಲೂಕಿನ ಗುಡೇಕೋಟೆಯಲ್ಲಿ ನಡೆದಿದೆ.
ಮೃತ ಯುವಕನನ್ನು ಮಧುಸೂಧನ(26) ಎಂದು ಗುರುತಿಸಲಾಗಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಅಸ್ವಸ್ಥಗೊಂಡಿದ್ದ ಈತನನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

Also read: ಸದೃಢ ರಾಷ್ಟ್ರ ಕಟ್ಟುವ ವಿವೇಕಾನಂದರ ಕನಸನ್ನು ನನಸಾಗಿಸಲು ಯುವಜನತೆ ಕೈಜೋಡಿಸಬೇಕು: ಡಿಸಿ ಸೆಲ್ವಮಣಿ
ಮೃತ ಯುವಕ ಸ್ನೇಹಿತರೊಂದಿಗೆ, ಮದುವೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂಬ ಬೇಸರವನ್ನು ಹೇಳಿಕೊಂಡಿದ್ದ. ಆತನ ತಂದೆ ಮಾನಸಿಕ ಅಸ್ವಸ್ಥರಾಗಿದ್ದು, ಯುವಕನ ಮದುವೆಗೆ ಹೆಣ್ಣು ಕೊಡಲು ಯಾರೂ ಮುಂದೆ ಬರುತ್ತಿರಲಿಲ್ಲ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post